2022ರಲ್ಲಿ ಸೈಕಲ್ ವೇಗವಾಗಿ ಚಲಿಸಲಿದೆ…ಸಮಾಜವಾದಿ ಪಕ್ಷ 351 ಸ್ಥಾನ ಗೆಲ್ಲಲಿದೆ; ಅಖಿಲೇಶ್
ಎಲ್ಲಾ ವರ್ಗದ ಜನರ ವಿಶ್ವಾಸದೊಂದಿಗೆ ಪಕ್ಷ ಜಯಗಳಿಸಲಿದೆ ಎಂದು ಹೇಳಿದರು.
Team Udayavani, Feb 22, 2020, 4:43 PM IST
ಲಕ್ನೋ:ಉತ್ತರಪ್ರದೇಶದಲ್ಲಿ 2022ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಭರ್ಜರಿ ಬಹುಮತ ಪಡೆಯುವ ಮೂಲಕ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಲಿದೆ ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ವಿಶ್ವಾಸವ್ಯಕ್ತಪಡಿಸಿದ್ದಾರೆ.
ಹಿಂದೂಸ್ತಾನ್ ಟೈಮ್ಸ್ ನ ಶೃಂಗದ ಹಿಂದೂಸ್ತಾನ್ ಶಿಕಾರ್ ಸಂಗಮ್ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಅಖಿಲೇಶ್, ಶೀಘ್ರದಲ್ಲಿಯೇ ಸಮಾಜವಾದಿ ಪಕ್ಷದ ಸೈಕಲ್ ವೇಗ ಪಡೆದುಕೊಳ್ಳಲಿದೆ ಎಂದರು.
ಮುಂಬರುವ ಚುನಾವಣೆಯಲ್ಲಿ ನಾವು 351 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಏರಲಿದ್ದೇವೆ. ಎಲ್ಲಾ ವರ್ಗದ ಜನರ ವಿಶ್ವಾಸದೊಂದಿಗೆ ಪಕ್ಷ ಜಯಗಳಿಸಲಿದೆ ಎಂದು ಹೇಳಿದರು.
ತಮ್ಮ ಪಕ್ಷ ಯಾವುದೇ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಒಂದು ವೇಳೆ ಯಾವುದೇ ಹೊಂದಾಣಿಕೆ ಮಾಡಿಕೊಳ್ಳಬೇಕಿದ್ದರು ಮಾಡಿಕೊಳ್ಳುತ್ತೇವೇ. ಆದರೆ ಮೈತ್ರಿ ಪ್ರಶ್ನೆ ಇಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು