ಶ್ರೀಲಂಕಾ ಸಂಸತ್ ವಿಸರ್ಜನೆ; ಏ.25ಕ್ಕೆ ಚುನಾವಣೆ ಘೋಷಣೆ
Team Udayavani, Mar 3, 2020, 4:15 PM IST
ಕೊಲೊಂಬೋ: ನಿರೀಕ್ಷೆಯಂತೆಯೇ ಆರು ತಿಂಗಳ ಮೊದಲು ಶ್ರೀಲಂಕಾ ಸಂಸತ್ ವಿಸರ್ಜನೆಯಾಗಿದೆ. ಹೊಸ ಚುನಾವಣೆ ಏ.25ರಂದು ನಡೆಯಲಿದೆ. ಈ ಬಗ್ಗೆ ಅಧ್ಯಕ್ಷ ಗೋಟಬಯ ರಾಜಪಕ್ಸ ಆದೇಶ ಹೊರಡಿಸಿದ್ದಾರೆ. 2015ರ ಸೆಪ್ಟೆಂಬರ್ನಲ್ಲಿ ಚುನಾವಣೆ ನಡೆದಿತ್ತು. ಶ್ರೀಲಂಕಾ ಕಾನೂನಿನ ಅನ್ವಯ ಕನಿಷ್ಠ ನಾಲ್ಕೂವರೆ ವರ್ಷ ಪೂರ್ತಿಗೊಂಡಿದ್ದರೆ, ಸಂಸತ್ ವಿಸರ್ಜಿಸಿ ಹೊಸ ಚುನಾವಣೆ ನಡೆಸಲು ಅವಕಾಶ ಉಂಟು. ದ್ವೀಪ ರಾಷ್ಟ್ರದ ಚುನಾವಣಾ ಆಯೋಗ ಕೂಡ ಚುನಾವಣೆ ನಡೆಸುವ ಬಗ್ಗೆ ಸರ್ಕಾರದಿಂದ ಮನವಿ ಬಂದಿರುವುದನ್ನು ಖಚಿತಪಡಿಸಿದೆ. ಪ್ರಧಾನಿ ಮಹಿಂದ ರಾಜಪಕ್ಸ ಶ್ರೀಲಂಕ ಪೊದುಜನ ಪೆರುಮನ ಪಕ್ಷವನ್ನು ಚುನಾವಣೆಯಲ್ಲಿ ಮುನ್ನಡೆಸುವುದು ಖಚಿತವಾಗಿದೆ. ಪ್ರತಿಪಕ್ಷ ಯುನೈಟೆಡ್ ನ್ಯಾಷನಲ್ ಪಾರ್ಟಿ ಆಂತರಿಕ ಭಿನ್ನಮತದಿಂದ ತೊಳಲಾಡುತ್ತಿರುವುದರಿಂದ ರಾಜಪಕ್ಸ ನೇತೃತ್ವದ ಪಕ್ಷವೇ ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆಯ ಬಗ್ಗೆ ದ್ವೀಪ ರಾಷ್ಟ್ರದಲ್ಲಿ ಚರ್ಚೆಗಳು ನಡೆದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು