ತಿಮ್ಮಪ್ಪನ ಹುಂಡಿ ಕಾಣಿಕೆಯಲ್ಲಿ ಇಳಿಕೆ!

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 12.75 ಲಕ್ಷ ರೂ. ಇಳಿಮುಖ; ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದ್ದರೂ ಹುಂಡಿ ಕಾಣಿಕೆಯಲ್ಲಿ ಇಳಿಕೆ

Team Udayavani, Oct 9, 2019, 9:00 PM IST

ತಿರುಪತಿ: ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಬ್ರಹ್ಮೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸಿದ್ದರಾದರೂ, ಹುಂಡಿಯಲ್ಲಿ ಕಾಣಿಕೆ ರೂಪದಲ್ಲಿ ಬರುವ ಹಣದಲ್ಲಿ ಹಿಂದಿನ ವರ್ಷಕ್ಕೆ ಹೋಲಿಸಿದರೆ 12.75 ಲಕ್ಷ ರೂ.ಗಳಷ್ಟು ಇಳಿಕೆಯಾಗಿದೆ ಎಂದು ದೇಗುಲದ ಆಡಳಿತ ಮಂಡಳಿ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್‌ ಕುಮಾರ್‌ ಸಿಂಘಲ್‌ ತಿಳಿಸಿದ್ದಾರೆ.

“9 ದಿನಗಳ ಕಾಲ ನಡೆಯುವ ಬ್ರಹ್ಮೋತ್ಸವಕ್ಕೆ ಕಳೆದ ವರ್ಷ 5.90 ಲಕ್ಷ ಭಕ್ತಾದಿಗಳು ಆಗಮಿಸಿದ್ದರು. ಈ ಬಾರಿ, 7.07 ಲಕ್ಷ ಭಕ್ತರು ಬಂದಿದ್ದಾರೆ. ಕಳೆದ ಬಾರಿ ಹುಂಡಿಗಳಲ್ಲಿ 20.52 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದ್ದು, ಈ ಬಾರಿ, 20.40 ಕೋಟಿ ರೂ. ಸಂಗ್ರಹವಾಗಿದೆ” ಎಂದು ತಿಳಿಸಿದ್ದಾರೆ. ಈ ಬಾರಿ 34.10 ಲಕ್ಷ ಲಡ್ಡುಗಳ ವಿತರಣೆ ಮಾಡಲಾಗಿದೆ. ಕಳೆದ ಬಾರಿ 24.01 ಲಕ್ಷ ಲಡ್ಡು ವಿತರಿಸಲಾಗಿತ್ತು ಎಂದು ಅನಿಲ್‌ ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ