ಶ್ರೀದೇವಿ ಸಾವಿನ ನಿಜ ಕಾರಣ ಮರಣೋತ್ತರ ವರದಿಯಲ್ಲಿ ಬಹಿರಂಗ
Team Udayavani, Feb 26, 2018, 5:27 PM IST
ಅಬುಧಾಬಿ: 54ರ ಹರೆಯದ ಬಾಲಿವುಡ್ ನಟಿ ಶ್ರೀದೇವಿ ಅವರ ಅಚ್ಚರಿಯ ಸಾವಿನ ಕುರಿತಾದ ಮರಣೋತ್ತರ ವರದಿಯ ಪ್ರಕಾರ ಆಕೆ ಸತ್ತದ್ದು ಬಾತ್ ಟಬ್ನಲ್ಲಿ ಆಕಸ್ಮಿಕವಾಗಿ ಮುಳುಗಿ ಎಂದು ಯುಎಇ ಗಲ್ಫ್ ನ್ಯೂಸ್ ವರದಿ ಮಾಡಿದೆ.
ನಟಿ ಶ್ರೀದೇವಿಯ ದೇಹದಲ್ಲಿ ಆಲ್ಕೋಹಾಲ್ ಇದ್ದುದು ಕೂಡ ಮರಣೋತ್ತರ ಪರೀಕ್ಷೆಯಲ್ಲಿ ಗೊತ್ತಾಗಿದೆ ಎಂದು ಯುಎಇ ಗಲ್ಫ್ ನ್ಯೂಸ್ ಹೇಳಿದೆ.
ನಟಿ ಶ್ರೀದೇವಿ ಅವರ ಸಾವು ಹೃದಯ ಸ್ತಂಭನದಿಂದ ಆಯಿತೆಂದು ಈ ಮೊದಲಿನ ವರದಿಗಳು ತಿಳಿಸಿದ್ದವು. ಆದರೆ ಈಗ ಮರಣೋತ್ತರ ಪರೀಕ್ಷೆಯ ಬಳಿಕ ಸಾವಿನ ಕಾರಣ ಕುರಿತಾಗಿ ತದ್ವಿರುದ್ಧ ವರದಿಗಳು ಬಂದಿರುವುದು ಆಕೆಯ ಕುಟುಂಬದವರಿಗೆ, ಅಸಂಖ್ಯಾತ ಅಭಿಮಾನಿಗಳಿಗೆ ಅತ್ಯಂತ ಆಘಾತಕಾರಿಯಾಗಿದೆ.
ನಟಿ ಶ್ರೀದೇವಿ ಬಾತ್ ಟಬ್ ನಲ್ಲಿ ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿರುವಲ್ಲಿ ಯಾವುದೇ ಕ್ರಿಮಿನಲ್ ಉದ್ದೇಶ ಇಲ್ಲ ಎಂದು ಫೊರೆನ್ಸಿಕ್ ವರದಿ ಹೇಳಿರುವುದಾಗಿ ಯುಎಇ ಗಲ್ಫ್ ನ್ಯೂಸ್ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?