ಶೃಂಗೇರಿ ಶ್ರೀಗಳಿಗೆ ಕೇರಳದಲ್ಲಿ ಸಚಿವರಿಂದಲೇ ಅವಮಾನ

Team Udayavani, Jun 14, 2017, 2:28 PM IST

SWAMIJI.jpg

ತಿರುವನಂತಪುರ/ಬೆಂಗಳೂರು: ಇಲ್ಲಿಗೆ ಸಮೀಪದ ಮಿತ್ರಾನಂದಪುರ ಶ್ರೀ ಮಹಾವಿಷ್ಣು ದೇವಸ್ಥಾನದ ಕೆರೆ ಅಭಿವೃದ್ಧಿ ಕಾಮಗಾರಿಯ ಲೋಕಾರ್ಪಣ ಕಾರ್ಯಕ್ರಮದಲ್ಲಿ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ಮಹಾ ಸ್ವಾಮೀಜಿಯವರಿಗೆ ಕೇರಳ ಸಚಿವ ಹಾಗೂ ಶಾಸಕರಿಂದ ಅವಮಾನ ನಡೆದಿದೆ ಎನ್ನಲಾಗಿದೆ.

ಸ್ವಾಮೀಜಿಯವರಿಗೆ ಮೀಸಲಾದ ಆಸನದಲ್ಲಿ ಶ್ರೀಗಳನ್ನು ಆಸೀನರಾಗಲು ಬಿಡದೆ ಆ ಆಸನವನ್ನು ಕೇರಳದ ದೇವಸ್ವಂ ಸಚಿವ ಕಡನಪಳ್ಳಿ ಸುರೇಂದ್ರನ್‌ ಮತ್ತು ಕಾಂಗ್ರೆಸ್‌ ಶಾಸಕ ಶಿವಕುಮಾರ್‌ ಅವರು ವೇದಿಕೆಯಿಂದ ತೆಗೆದು ಶ್ರೀಗಳಿಗೆ ಅವಮಾನ ಮಾಡಿದ ಬಗ್ಗೆ ಮಲಯಾಳ ಪತ್ರಿಕೆಯಲ್ಲಿ ವರದಿಯಾಗಿದೆ. 

ಕೇರಳ ಸಚಿವರು ಮತ್ತು ಶಾಸಕರ ವರ್ತನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಖಂಡಿಸಿದ್ದು, ಕೂಡಲೇ ಸಚಿವರು ಮತ್ತು ಶಾಸಕರು ಸ್ವಾಮೀಜಿಯವರ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.

ಮಿತ್ರಾನಂದಪುರ ಶ್ರೀ ಮಹಾವಿಷ್ಣು ದೇವಸ್ಥಾನದ ಕೆರೆ ಅಭಿವೃದ್ಧಿ ಕಾಮಗಾರಿ ಚಾಲನ ಸಮಾರಂಭದಲ್ಲಿ ಆಶೀರ್ವಚನ ನೀಡಲು ಶೃಂಗೇರಿ ಪೀಠದ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತಿ ಸನ್ನಿಧಾನಂ ಸ್ವಾಮೀಜಿಯವರನ್ನು ಆಹ್ವಾನಿಸಲಾಗಿತ್ತು. ಸಂಪ್ರದಾಯದಂತೆ ಅವರಿಗೆ ವೇದಿಕೆ ಮೇಲೆ ವಿಶೇಷ ಪೀಠದ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಸಚಿವ ಕಡನಪಳ್ಳಿ ಸುರೇಂದ್ರನ್‌ ಮತ್ತು ಶಾಸಕ ಶಿವಕುಮಾರ್‌ ಅವರು ಈ ಪೀಠವನ್ನು ಅಲ್ಲಿಂದ ತೆಗದುಹಾಕಿದರು ಎನ್ನಲಾಗಿದೆ. ಇದರಿಂದ ಬೇಸರಗೊಂಡ ಸ್ವಾಮೀಜಿಯವರು ಆಶೀರ್ವಚನ ನೀಡದೆ ಸಭೆಯಿಂದ ನಿರ್ಗ ಮಿಸಿದರು ಎಂದು ಮೂಲಗಳು ತಿಳಿಸಿವೆ.

ಸಚಿವರ ವರ್ತನೆಗೆ ಖಂಡನೆ: ಕೇರಳ ಸಚಿವ ಕಡನಪಳ್ಳಿ ಸುರೇಂದ್ರನ್‌ ಅವರ ವರ್ತನೆ ಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಸ್ವಾಮೀಜಿಯ ವರನ್ನು ಅತಿಥಿಯಾಗಿ ಆಹ್ವಾನಿಸಿ ಅವಮಾನಿ ಸಿರುವುದು ಖಂಡನಾರ್ಹ. ಸಚಿವರಿಗೆ ಇಷ್ಟವಿಲ್ಲ ದಿದ್ದರೆ ಸ್ವಾಮೀಜಿಯವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬಾರದಿತ್ತು. ಆದರೆ, ಆಹ್ವಾನಿಸಿ ಅವಮಾನಿಸಿರುವುದು ಮಠದ ಅಸಂಖ್ಯಾತ ಭಕ್ತರಿಗೆ ನೋವಾಗಿದೆ. ಹೀಗಾಗಿ ಸಚಿವರು ಕೂಡಲೇ ಸ್ವಾಮೀಜಿಯವರ ಕ್ಷಮೆಯಾಚಿಸ ಬೇಕು ಎಂದುಒತ್ತಾಯಿಸಿದ್ದಾರೆ.

ಕೇರಳ ಸಚಿವರು ಮತ್ತು ಶಾಸಕರ ವರ್ತನೆ ಖಂಡಿಸಿರುವ ಶೋಭಾ ಕರಂದ್ಲಾಜೆ, ವಿನಾಶ ಕಾಲೇ ವಿಪರೀತ ಬುದ್ಧಿ ಎನ್ನುವಂತೆ ಕೇರಳದ ಕಾಂಗ್ರೆಸ್‌-ಸಿಪಿಎಂ ಕೂಟ ವರ್ತಿಸುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಕೇರಳ ಮುಖ್ಯ ಮಂತ್ರಿಗಳು ಸ್ವಾಮೀಜಿಯವರ ಕ್ಷಮೆ ಯಾಚಿಸ ಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.