ರಾಜ್ಯಕ್ಕೆ ಮುಂಗಾರು ವಿಳಂಬ : ಜೂ. 9ಕ್ಕೆ ಮುಂಗಾರು ರಾಜ್ಯ ಪ್ರವೇಶ?


Team Udayavani, May 16, 2019, 6:10 AM IST

MANSOON

ಹೊಸದಿಲ್ಲಿ/ಬೆಂಗಳೂರು: ಈ ಬಾರಿ ಮುಂಗಾರು ಮಳೆ ಪ್ರವೇಶ ತಡವಾಗುವುದು ಪಕ್ಕಾ ಆಗಿದೆ. ಜೂ.6ಕ್ಕೆ ಮುಂಗಾರು ಕೇರಳ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕರ್ನಾಟಕಕ್ಕೆ ಜೂ.8 ಅಥವಾ 9ರಂದು ಮುಂಗಾರು ಮಾರುತ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

ಮುಂಗಾರು ಮಾರುತಗಳ ತೀವ್ರತೆ ಹೆಚ್ಚಾಗಿದ್ದರೆ ಒಂದೇ ದಿನಕ್ಕೆ ರಾಜ್ಯದ ಹಲವು ಭಾಗಗಳಿಗೆ ವ್ಯಾಪಿಸುತ್ತದೆ. ಮಾರುತಗಳ ತೀವ್ರತೆ ಕಡಿಮೆಯಿದ್ದರೆ ಹೆಚ್ಚಿನ ಅವಧಿ ಕೇರಳದಲ್ಲಿಯೇ ಉಳಿಯುತ್ತದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

ಜೂ. 6ಕ್ಕೆ ಕೇರಳ ಪ್ರವೇಶ
ಖಾಸಗಿ ಹವಾಮಾನ ಮಾಪನ ಸಂಸ್ಥೆ ಸ್ಕೈಮೆಟ್‌ ಪ್ರಕಾರ ಜೂ. 4ಕ್ಕೆ ಮುಂಗಾರು ಕೇರಳ ಪ್ರವೇಶಿಸಲಿದೆ. ಆದರೆ ಭಾರತೀಯ ಹವಾಮಾನ ಸಂಸ್ಥೆ ಬುಧವಾರ ಪತ್ರಿಕಾ ಹೇಳಿಕೆ ಹೊರಡಿಸಿದ್ದು, ಜೂ.6ರಂದು ಕೇರಳಕ್ಕೆ ಪ್ರವೇಶಿಸಲಿದೆ ಎಂದಿದೆ. ಆದರೂ ಮುಂಗಾರು ಪ್ರವೇಶದ ಅವಧಿ ನಾಲ್ಕು ದಿನ ಆಚೀಚೆ ಆಗಲೂಬಹುದು ಎಂದೂ ಹವಾಮಾನ ಇಲಾಖೆ ಹೇಳಿದೆ. ಮೇ 18-19ರ ವೇಳೆಗೆ ಅಂಡಮಾನ್‌ ಸಮುದ್ರ, ನಿಕೋಬಾರ್‌ ದ್ವೀಪಗಳು ಮತ್ತು ಬಂಗಾಲ ಕೊಲ್ಲಿ ಭಾಗಗಳಲ್ಲಿ ಮಾನ್ಸೂನ್‌ ಮೂಡುವ ಚಿಹ್ನೆಗಳು ಕಾಣಿಸಿಕೊಳ್ಳಲಿದ್ದು, ಕೇರಳ ಕರಾವಳಿಗೆ ಜೂನ್‌ 6ರ ಹೊತ್ತಿಗೆ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ವಿವರಿಸಲಾಗಿದೆ. ಸಾಮಾನ್ಯವಾಗಿ ಪ್ರತಿ ವರ್ಷ ಜೂನ್‌1ಕ್ಕೆ ಕೇರಳಕ್ಕೆ ಮುಂಗಾರು ಆಗಮಿಸುತ್ತಿತ್ತು. ಈಗ ಐದರಿಂದ ಆರು ದಿನ ತಡವಾಗುವ ಸಾಧ್ಯತೆಗಳೇ ಹೆಚ್ಚಾಗಿವೆ.

2014, 2015 ಹಾಗೂ 2016ರಲ್ಲೂ ಮಾನ್ಸೂನ್‌ ಪ್ರವೇಶ ನಾಲ್ಕೈದು ದಿನ ವಿಳಂಬವಾಗಿತ್ತು. ಸಾಮಾನ್ಯವಾಗಿ ಮಾನ್ಸೂನ್‌ ಆಗಮನದ ಸಮಯವೂ ಮಳೆಯ ಪ್ರಮಾಣದ ಮೇಲೆ ಪರಿಣಾಮ ಬೀರುತ್ತದೆ. ಈ ಬಾರಿ ಸರಕಾರಿ ಹವಾಮಾನ ಇಲಾಖೆಯ ಪ್ರಕಾರ ಶೇ. 96ರಷ್ಟು ಅಂದರೆ, ಸಾಮಾನ್ಯಕ್ಕಿಂತ ಸ್ವಲ್ಪವೇ ಕಡಿಮೆ ಮಳೆಯಾಗಲಿದೆ ಎಂದು ಅಂದಾಜು ಮಾಡಿದ್ದರೆ, ಖಾಸಗಿ ಸಂಸ್ಥೆ ಸ್ಕೈಮೆಟ್‌ ಶೇ. 93ರಷ್ಟು ಮಳೆಯಾಗಲಿದೆ ಎಂದಿದೆ.

ಜೂನ್‌ನಲ್ಲೇ ಮೋಡ ಬಿತ್ತನೆ: ಕೃಷ್ಣ ಬೈರೇಗೌಡ
ಬೆಂಗಳೂರು: ಈ ಬಾರಿಯೂ ಮಳೆ ಕೊರತೆಯ ಮುನ್ಸೂಚನೆ ಅರಿತಿರುವ ರಾಜ್ಯ ಸರಕಾರ ಮುಂದಿನ ಎರಡು ವರ್ಷಗಳಿಗೆ ಅನ್ವಯವಾಗುವಂತೆ ಮೋಡ ಬಿತ್ತನೆ ಕಾರ್ಯ ನಡೆಸಲು ತೀರ್ಮಾನಿಸಿದ್ದು, ಜೂನ್‌ ಕೊನೆಯ ವಾರದಲ್ಲಿ ಮೋಡ ಬಿತ್ತನೆ ಆರಂಭಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

ರಾಜ್ಯದ ಬರ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಪರೆನ್ಸ್‌ ಮೂಲಕ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಆಗಸ್ಟ್‌ ಹಾಗೂ ಸೆಪ್ಟಂಬರ್‌ ತಿಂಗಳಿನಲ್ಲಿ ಮಳೆಯ ಅಭಾವ ನೋಡಿಕೊಂಡು ಮೋಡ ಬಿತ್ತನೆ ಕಾರ್ಯ ಆರಂಭಿಸಲಾಗುತ್ತಿತ್ತು. ಆ ಸಂದರ್ಭದಲ್ಲಿ ಮೋಡಗಳ ಕೊರತೆಯಿಂದ ಬಿತ್ತನೆ ಕಾರ್ಯಕ್ಕೆ ಸೂಕ್ತ ಸ್ಪಂದನೆ ದೊರೆಯುತ್ತಿರಲಿಲ್ಲ. ಈ ಬಾರಿ ಮುಂಗಾರು ದುರ್ಬಲವಾಗಿದೆ ಎಂಬ ವರದಿ ಆಧರಿಸಿ, ರಾಜ್ಯ ಸರಕಾರ ಈಗಾಗಲೇ ಮೋಡ ಬಿತ್ತನೆಗೆ ತೀರ್ಮಾನ ಮಾಡಿದ್ದು, ಎರಡು ವರ್ಷಗಳ ಅವಧಿಗೆ 88 ಕೋಟಿ ರೂಪಾಯಿ ವೆಚ್ಚದ ಮೋಡ ಬಿತ್ತನೆ ಯೋಜನೆಗೆ ತೀರ್ಮಾನಿಸಲಾಗಿದ್ದು, ಒಂದು ವಾರದಲ್ಲಿ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

2017ರಲ್ಲಿ ವರ್ಷಧಾರೆ ಹೆಸರಿನಲ್ಲಿ ಕೈಗೊಂಡ ಮೋಡ ಬಿತ್ತನೆ ಕಾರ್ಯ ಯಶಸ್ವಿಯಾಗಿದ್ದು, ಇದನ್ನು ಶಾಶ್ವತ ಕಾರ್ಯಕ್ರಮವನ್ನಾಗಿ ಮಾಡುವಂತೆ ತಜ್ಞರು ವರದಿ ನೀಡಿದ್ದಾರೆ. ಮೋಡ ಬಿತ್ತನೆಗೆ ಬೆಂಗಳೂರು, ಗದಗ ಹಾಗೂ ಸುರಪುರದಲ್ಲಿ ರಾಡಾರ್‌ಗಳನ್ನು ಅಳವಡಿಸಲಾಗಿದ್ದು, ಐಐಎಸ್‌ಸಿ, ಚೆನ್ನೆ „ ಹಾಗೂ ಪುಣೆಯ ಐಐಟಿಎಂ ತಜ್ಞರು, ಎನ್‌ಎಎಲ್‌ ಮುಖ್ಯಸ್ಥರು, ಐಎಂಡಿ ಮುಖ್ಯಸ್ಥರು, ಬೆಂಗಳೂರು ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣ ಅಧಿಕಾರಿಗಳ ಸಹಕಾರದೊಂದಿಗೆ ಯೋಜನೆ ಜಾರಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.