ಅಮಾನ್ಯ ನೋಟುಗಳ ಎಣಿಕೆ ಇನ್ನೂ ಮುಗಿದಿಲ್ಲ: ಪಟೇಲ್
Team Udayavani, Jul 13, 2017, 3:50 AM IST
ನವದೆಹಲಿ: ಅಮಾನ್ಯಗೊಂಡು ಆರ್ಬಿಐನಲ್ಲಿ ಜಮೆಯಾಗಿರುವ 500 ರೂ. ಮತ್ತು 1 ಸಾವಿರ ರೂ. ನೋಟುಗಳ ಎಣಿಕೆ ಇನ್ನೂ ಮುಗಿದಿಲ್ಲ. ಹೀಗೆಂದು ಆರ್ಬಿಐ ಗವರ್ನರ್ ಡಾ.ಊರ್ಜಿತ್ ಪಟೇಲ್ ಹಣಕಾಸು ಖಾತೆಗಾಗಿನ ಸಂಸತ್ ಸ್ಥಾಯಿತಿ ಸಮಿತಿಗೆ ಮಾಹಿತಿ ನೀಡಿದ್ದಾರೆ.
ನೋಟುಗಳ ಅಮಾನ್ಯಕ್ಕಿಂತ ಮೊದಲು ದೇಶಾದ್ಯಂತ ಚಲಾವಣೆಯಲ್ಲಿ ಇದ್ದದ್ದು 17.7 ಲಕ್ಷ ಕೋಟಿ ರೂ. ಸದ್ಯ ಅದರ ಪ್ರಮಾಣ 15.4 ಲಕ್ಷ ಕೋಟಿ ಆಗಿದೆ ಎಂದು ಅವರು ಹೇಳಿದ್ದಾರೆ. ಇಷ್ಟು ಮಾತ್ರವಲ್ಲದೆ ಸಮಾಜವಾದಿ ಪಕ್ಷದ ಸಂಸದ ನರೇಶ್ ಅಗರ್ವಾಲ್ ಅವರು ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳ ಒಟ್ಟು ಅನುತ್ಪಾದಕ ಆಸ್ತಿಯ ಶೇ.25ರಷ್ಟು ಪ್ರಮಾಣವನ್ನು ಕೇವಲ 12 ಮಂದಿ ಕೈಗಾರಿಕೋದ್ಯಮಿಗಳು ಮತ್ತು ಸಂಸ್ಥೆಗಳು ಹೊಂದಿವೆ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತೆ ಒತ್ತಾಯಿಸಿದರು ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಸಂಸತ್ನ ಮುಂಗಾರು ಅಧಿವೇಶನದಲ್ಲಿ ನೋಟುಗಳ ಅಮಾನ್ಯಕ್ಕೆ ಸಂಬಂಧಿಸಿದಂತೆ ದೇಶದ ಅರ್ಥ ವ್ಯವಸ್ಥೆ ಡಿಜಿಟಲ್ ವ್ಯವಸ್ಥೆಗೆ ಹೊರಳುತ್ತಿರುವ ಬಗ್ಗೆ ಸರ್ಕಾರ ವರದಿ ಮಂಡಿಸಲಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ