ಬೆಸ್ಟ್ ಆಫ್ ಲಕ್: ಲೆಫ್ಟಿನೆಂಟ್ ಶಿವಾಂಗಿ ಭಾರತೀಯ ನೌಕಾದಳದ ಮೊದಲ ಮಹಿಳಾ ಪೈಲಟ್
Team Udayavani, Dec 2, 2019, 3:37 PM IST
ಕೊಚಿ:ಭಾರತೀಯ ನೌಕಾಪಡೆಯ ಮೊದಲ ಮಹಿಳಾ ಪೈಲಟ್ ಆಗಿ ಉಪ ಲೆಫ್ಟಿನೆಂಟ್ ಶಿವಾಂಗಿ ಸೋಮವಾರ ನೇಮಕವಾಗುವ ಮೂಲಕ ಭಾರತೀಯ ನೌಕಾಪಡೆಯ ಮೊದಲ ಮಹಿಳಾ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ನನಗೆ ಇದೊಂದು ತುಂಬಾ ಹೆಮ್ಮೆಯ ವಿಚಾರವಾಗಿದೆ. ನನ್ನ ಪೋಷಕರಿಗೆ ತುಂಬಾ ಖುಷಿಕೊಟ್ಟಿದೆ. ನನ್ನ ದೀರ್ಘಕಾಲದ ಕನಸು ಕೊನೆಗೂ ನನಸಾಗಿದೆ. ನಾನೀಗ ಮೊದಲ ಮಹಿಳಾ ಪೈಲಟ್ ಎಂಬುದು ದೊಡ್ಡ ಹೆಮ್ಮೆಯ ವಿಚಾರವಾಗಿದೆ. ನಾನೀಗ ನನ್ನ ಮೂರನೇ ಹಂತದ ತರಬೇತಿಯನ್ನು ಪೂರ್ಣಗೊಳಿಸಲು ಎದುರು ನೋಡುತ್ತಿದ್ದೇನೆ ಎಂದು ಕೊಚಿ ನೌಕಾನೆಲೆಯಲ್ಲಿ ಕರ್ತವ್ಯಕ್ಕೆ ಹಾಜರಾದ ನಂತರ ಶಿವಾಂಗಿ ಈ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.
ಬಿಹಾರದ ಮುಝಾಫರ್ ಪುರ್ ನಲ್ಲಿ ಜನಿಸಿರುವ ಶಿವಾಂಗಿ. ಪ್ರಾಥಮಿಕ ತರಬೇತಿಯ ನಂತರ 2018ರಲ್ಲಿ ಶಿವಾಂಗಿ ಭಾರತೀಯ ನೌಕಾಪಡೆಗೆ ಆಯ್ಕೆ ಮಾಡಲಾಗಿತ್ತು. ಸೋಮವಾರ ಕೊಚಿಯ ನೌಕಾ ನೆಲೆಗೆ ಶಿವಾಂಗಿ ಪೈಲಟ್ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದರು.
ನೌಕಾಪಡೆಯಲ್ಲಿ ಈಗಾಗಲೇ ಮಹಿಳೆಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಹಿಳೆ ಕಾಕ್ ಪಿಟ್ ನಲ್ಲಿ ಇಲ್ಲದಿರುವಾಗ ಆ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಉತ್ಸಾಹಿಗಳು ಇದ್ದೇ ಇರುತ್ತಾರೆ. ಆದರೆ ಇದು ಸ್ವಲ್ಪ ವಿಭಿನ್ನವಾದದ್ದು. ಇದೇ ಮೊದಲ ಬಾರಿಗೆ ಕಾಕ್ ಪಿಟ್ ನಲ್ಲಿ ಮಹಿಳೆ ಇರುವಂತಾಗಿದೆ. ಇದರಿಂದಾಗಿ ರಕ್ಷಣಾ ಕ್ಷೇತ್ರದಲ್ಲಿ ಬೇರೆ ಮಹಿಳೆಯರಿಗೂ ಹೆಚ್ಚಿನ ಅವಕಾಶ ಕಲ್ಪಿಸಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಮಹಿಳೆಯೂ ಕೂಡಾ ಹೆಲಿಕಾಪ್ಟರ್ ಮತ್ತು ಯುದ್ಧ ವಿಮಾನಗಳಲ್ಲಿಯೂ ತನ್ನ ಕರ್ತವ್ಯ ನಿರ್ವಹಿಸಲು ಆರಂಭವಾಗಬಹುದು ಎಂದು ಶಿವಾಂಗಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ