ಸಬ್ಸಿಡಿ ಗ್ಯಾಸ್: 5.57 ರೂ. ಏರಿಕೆ
Team Udayavani, Apr 3, 2017, 9:47 AM IST
ಹೊಸದಿಲ್ಲಿ: ಉತ್ತರ ಪ್ರದೇಶ ಸಹಿತ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮುಕ್ತಾಯವಾಗುತ್ತಿರುವಂತೆಯೇ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಿಸಲಾಗಿದೆ. ಸಬ್ಸಿಡಿ ಸಹಿತ ಅಡುಗೆ ಅನಿಲ ಸಿಲಿಂಡರ್ಗೆ 5.57 ರೂ.ಗಳಷ್ಟು ಹೆಚ್ಚಳ ಮಾಡಲಾಗಿದೆ. ಆದರೆ, ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 14.50 ರೂ. ಇಳಿಸಲಾಗಿದೆ. ಮಾ. 1ರಂದು ಪ್ರತಿ ಸಿಲಿಂಡರ್ಗೆ 86 ರೂ.ಗಳಷ್ಟು ಹೆಚ್ಚಳ ಮಾಡಿ ಒಂದು ತಿಂಗಳ ಬಳಿಕ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಮಾಡಲಾಗಿದೆ. ದರ ಹೆಚ್ಚಳದಿಂದಾಗಿ ಗೃಹ ಬಳಕೆ ಸಿಲಿಂಡರ್ ದರ ದಿಲ್ಲಿಯಲ್ಲಿ 440.50 ರೂ. ಆಗಿದೆ. ಇದಕ್ಕಿಂತ ಮೊದಲು ಫೆ. 1 ಮತ್ತು ಮಾ. 1ರಂದು 2 ರೂ. ಹೆಚ್ಚಿಸಲಾಗಿತ್ತು. ಅಕ್ಟೋಬರ್ 2016ರ ಬಳಿಕ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಳಿತಗಳಾಗುತ್ತಿವೆ. ರಿಯಾಯಿತಿ ಇಲ್ಲದ ಎಲ್ಪಿಜಿ ಸಿಲಿಂಡರ್ ಬೆಲೆ ಕಳೆದ ಸೆಪ್ಟಂಬರ್ನಲ್ಲಿ 466.50 ರೂ. ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ