ಕಬ್ಬು ಬೆಂಬಲ ಬೆಲೆ 15 ರೂ. ಏರಿಕೆಗೆ ಕೇಂದ್ರ ಸರ್ಕಾರ ನಿರ್ಧಾರ
Team Udayavani, Aug 4, 2022, 7:10 AM IST
ನವದೆಹಲಿ: ಪ್ರತಿ ಕ್ವಿಂಟಲ್ ಕಬ್ಬಿಗೆ 15 ರೂ. ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವ ಬಗ್ಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಇದರಿಂದಾಗಿ ಅಕ್ಟೋಬರ್ನಿಂದ ಶುರುವಾಗುವ 2022-23ನೇ ಸಾಲಿಗಾಗಿ ಬೆಂಬಲ ಬೆಲೆ ಹಾಲಿ 305 ರೂ.ಗಳಿಂದ 315 ರೂ.ಗಳಿಗೆ ಏರಿಕೆಯಾದಂತಾಗಿದೆ.
ಶೇ.10.25ರ ದರದಲ್ಲಿ ಅದನ್ನು ನೀಡಲಾಗುತ್ತದೆ. ಇದಲ್ಲದೆ ಶೇ.0.1 ದರದಲ್ಲಿ ಪ್ರತಿ ಕ್ವಿಂಟಲ್ಗೆ 3.05 ರೂ. ಪ್ರೀಮಿಯಂ ಅನ್ನೂ ನೀಡಲಾಗುತ್ತದೆ.
ಆರ್ಥಿಕ ವ್ಯವಹಾರಗಳಿಗಾಗಿನ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ ದರ ಪರಿಷ್ಕರಣೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ನಿರ್ಧಾರದಿಂದಾಗಿ ಕರ್ನಾಟಕ ಸೇರಿದಂತೆ ದೇಶದಲ್ಲಿರುವ 5 ಕೋಟಿ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು