ರೊಹಿಂಗ್ಯರ ಬಿಡುಗಡೆ ಸಾಧ್ಯವಿಲ್ಲ: ಸುಪ್ರೀಂ
Team Udayavani, Apr 8, 2021, 10:50 PM IST
ನವದೆಹಲಿ: ಜಮ್ಮುವಿನ ಶ್ರೀನಗರದಲ್ಲಿ ಬಂಧನ ಗೃಹದಲ್ಲಿ ಇರಿಸಲಾಗಿರುವ ಮ್ಯಾನ್ಮಾರ್ ಮೂಲದ ರೊಹಿಂಗ್ಯಾ ಸಮುದಾಯದವರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಅಲ್ಲದೆ, ಕಾನೂನು ಪ್ರಕ್ರಿಯೆಯಂತೆಯೇ ಅವರ ಸ್ವದೇಶಕ್ಕೆ ಕಳುಹಿಸಬೇಕೆಂದು ನ್ಯಾಯಪೀಠ ಸ್ಪಷ್ಟವಾಗಿ ಸೂಚಿಸಿದೆ.
ಜಮ್ಮುವಿನಲ್ಲಿರುವ ಬಂಧನ ಗೃಹದಲ್ಲಿರುವ ರೊಹಿಂಗ್ಯಾ ಸಮುದಾಯದ 150 ಜನರನ್ನು ಬಿಡುಗಡೆ ಮಾಡಬೇಕೆಂದು ಮೊಹಮ್ಮದ್ ಸಲೀಮುಲ್ಲಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ, ನ್ಯಾ. ಎ.ಎಸ್. ಬೋಪಣ್ಣ ಹಾಗೂ ನ್ಯಾ. ವಿ. ರಾಮಸುಬ್ರಹ್ಮಣ್ಯಂ ಅವರುಳ್ಳ ಪೀಠ, ಅರ್ಜಿಯನ್ನು ಮಾನ್ಯ ಮಾಡಲಿಲ್ಲ. ಅವರನ್ನು ಅವರ ದೇಶಕ್ಕೆ ವಾಪಸ್ ಕಳುಹಿಸಬೇಕೇ ವಿನಃ ಅವರನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ