ಅಲ್ಪಸಂಖ್ಯಾತ ಸ್ಥಾನಮಾನ: ಪರಿಶೀಲನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
Team Udayavani, Oct 7, 2022, 2:05 AM IST
ಹೊಸದಿಲ್ಲಿ: ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರಿದ್ದರೆ, ಅಂಥ ಶಿಕ್ಷಣ ಸಂಸ್ಥೆಗಳು ಅನಂತರದಲ್ಲಿ “ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ’ ಎಂಬ ಸ್ಥಾನಮಾನ ಪಡೆಯುವ ಸಾಧ್ಯತೆಯಿದೆಯೇ ಎಂಬ ಬಗ್ಗೆ ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.
ಜತೆಗೆ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಉತ್ತರಪ್ರದೇಶ ಸರಕಾರ, ರಾಷ್ಟ್ರೀಯ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಆಯೋಗ, ರಾಷ್ಟ್ರೀಯ ವೈದ್ಯಕೀಯ ಆಯೋಗ ಮತ್ತು ಇತರರಿಗೆ ನೋಟಿಸ್ ಕೂಡ ಜಾರಿ ಮಾಡಿದೆ.
ಯಾವುದೇ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರಿದ್ದಾರೆ ಎಂಬ ಮಾತ್ರಕ್ಕೆ ಅದು “ಅಲ್ಪಸಂಖ್ಯಾತ ಸಂಸ್ಥೆ’ ಎಂದು ಪರಿಗಣಿಸಲ್ಪಡುವುದಿಲ್ಲ ಎಂಬ ಅಲಹಾಬಾದ್ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ, ಮಹಾಯಾಣ ಥೇರವಾಡ ವಜ್ರಯಾನ ಬುದ್ಧಿಸ್ಟ್ ರಿಲೀಜಿಯಸ್ ಆ್ಯಂಡ್ ಚಾರಿಟೆಬಲ್ ಟ್ರಸ್ಟ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆ ಅರ್ಜಿಯನ್ನು ಗುರುವಾರ ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾ| ಬಿ.ಆರ್. ಗವಾಯಿ ಮತ್ತು ನ್ಯಾ| ಬಿ.ವಿ. ನಾಗರತ್ನಾ ಅವರನ್ನೊಳಗೊಂಡ ನ್ಯಾಯಪೀಠ, ಈ ಕುರಿತು ಪರಿಶೀಲಿಸಲು ಸಮ್ಮತಿಸಿದೆ.
ಇದನ್ನೂ ಓದಿ : ಚೀನದ ಹಲವೆಡೆ ಮತ್ತೆ ಲಾಕ್ಡೌನ್; ಪ್ರಯಾಣದ ಮೇಲೆ ನಿರ್ಬಂಧ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?