ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಜುಬೇರ್‌ಗೆ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ
Team Udayavani, Jul 12, 2022, 7:57 PM IST
ನವದೆಹಲಿ: ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಜುಬೇರ್ ಮೊಹಮದ್‌ಗೆ ನೀಡಿದ್ದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್, ತನ್ನ ಮುಂದಿನ ಆದೇಶದವರೆಗೆ ವಿಸ್ತರಿಸಿ ಆದೇಶ ನೀಡಿದೆ.
ಟ್ವೀಟ್ ಒಂದರಲ್ಲಿ ಹಿಂದೂಗಳ ಧಾರ್ಮಿಕ ಭಾವನಗೆ ನೋವುಂಟು ಮಾಡಿದ ವಿಚಾರದಲ್ಲಿ ಉತ್ತರ ಪ್ರದೇಶದ ಸೀತಾಪುರ ಪೊಲೀಸರು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ, ಜುಬೇರ್‌ಗೆ ನ್ಯಾಯಾಲಯವು ಶುಕ್ರವಾರ 5 ದಿನಗಳ ಜಾಮೀನು ನೀಡಿತ್ತು.
ಇದೀಗ ಅದನ್ನು ಮುಂದಿನ ಆದೇಶದವರೆಗೆ ವಿಸ್ತರಿಸಲಾಗಿದೆ. ಇದಷ್ಟೇ ಅಲ್ಲದೆ ಜುಬೇರ್ ವಿರುದ್ಧ ಅಕ್ರಮ ಹಣ ವರ್ಗಾವಣೆ, ಲಖೀಂಪುರ ಖೇರಿ ಪ್ರಕರಣದಲ್ಲಿ ದ್ವೇಷ ಬಿತ್ತುವ ಪ್ರಯತ್ನಪಟ್ಟಿದ್ದರೆಂಬ ಪ್ರಕರಣ ದಾಖಲಾಗಿವೆ. ಸೋಮವಾರ ಲಖೀಂಪುರ ಖೇರಿ ನ್ಯಾಯಾಲಯ ಜುಬೇರ್‌ನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.