ಹೈಕೋರ್ಟ್ ಗಳಲ್ಲಿ ಪ್ರಕರಣಗಳ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಬಳಸಲು ಸುಪ್ರೀಂ ನಿರ್ದೇಶನ
Team Udayavani, Apr 7, 2020, 2:10 AM IST
ಹೈಕೋರ್ಟ್‌ಗಳಲ್ಲಿ ಪ್ರಕರಣಗಳ ವಿಚಾರಣೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ವಕೀಲರು, ಕಕ್ಷಿದಾರರು ಕೋರ್ಟ್ ಆವರಣದಲ್ಲಿ ಸೇರುವುದರಿಂದ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಈ ತೀರ್ಮಾನ ಕೈಗೊಂಡಿದೆ.
ಲಾಕ್‌ಡೌನ್ ಹಿನ್ನೆಲೆಯಲ್ಲಿ ಕೆಲವು ಕೋರ್ಟ್‌ಗಳಲ್ಲಿ ಈಗಾಗಲೇ ಮಾ. 23ರಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಾಗುತ್ತಿದೆ.