ಒಮರ್‌ ಅಬ್ದುಲ್ಲಾ ವಿರುದ್ಧ ಮೊಕದ್ದಮೆ : ಕೇಂದ್ರಕ್ಕೆ ನೋಟಿಸ್‌ ಜಾರಿ

Team Udayavani, Feb 15, 2020, 2:05 AM IST

ಹೊಸದಿಲ್ಲಿ: ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಒಮರ್‌ ಅಬ್ದುಲ್ಲಾ ವಿರುದ್ಧ ಸಾರ್ವಜನಿಕ ಭದ್ರತಾ ಕಾಯ್ದೆ (ಪಿಎಸ್‌ಎ ಆ್ಯಕ್ಟ್) ಅನ್ವಯ ಮೊಕದ್ದಮೆ ಹೂಡಿದ ಕೇಂದ್ರ ಸರಕಾರಕ್ಕೆ ಸುಪ್ರೀಂಕೋರ್ಟ್‌ ಶುಕ್ರವಾರ ನೋಟಿಸ್‌ ನೀಡಿದೆ.

ಸಹೋದರಿ ಸಾರಾ ಅಬ್ದುಲ್ಲಾ ಪೈಲಟ್‌ ಸಲ್ಲಿಕೆ ಮಾಡಿದ ನ್ಯಾ| ಅರುಣ್‌ ಮಿಶ್ರಾ ಮತ್ತು ನ್ಯಾ| ಇಂದಿರಾ ಬ್ಯಾನರ್ಜಿ ಅವರನ್ನು ಒಳಗೊಂಡ ಪೀಠ, ಮಾ.2ರ ನಂತರ ಪ್ರಕರಣದ ವಿಚಾರಣೆ ನಡೆಸುವುದಾಗಿ ಹೇಳಿತು.

ಸೋಮವಾರವೇ ಸಾರಾ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಪೀಠದಲ್ಲಿದ್ದ ನ್ಯಾ| ಎಂ.ಎಂ.ಶಾಂತನಗೌಡರ್‌ ವಿಚಾರಣೆಯಿಂದ ಹಿಂದೆ ಸರಿದಿದ್ದ ಹಿನ್ನೆಲೆಯಲ್ಲಿ ಹೊಸ ನ್ಯಾಯಪೀಠ ರಚಿಸಿ ಅರ್ಜಿ ಕೈಗೆತ್ತಿಕೊಳ್ಳಲಾಯಿತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ