ಅವಧಿಗೂ ಮುನ್ನ ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಸುಪ್ರೀಂ ಆದೇಶ

ಪೆರಾರಿವಾಲನ್ ಪ್ರಕರಣದ ತೀರ್ಪು ಎಲ್ಲರ ವಿಷಯದಲ್ಲಿ ಅನ್ವಯಿಸುತ್ತದೆ...

Team Udayavani, Nov 11, 2022, 3:03 PM IST

supreem

ನವದೆಹಲಿ : ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ ಮತ್ತು ಆರ್.ಪಿ.ರವಿಚಂದ್ರನ್ ಸೇರಿ ಆರು ಮಂದಿಯನ್ನು ಅವಧಿಗೂ ಮುನ್ನ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ.ಅವಧಿಗೂ ಮುನ್ನ ಬಿಡುಗಡೆ ಕೋರಿ ನಳಿನಿ ಮತ್ತು ರವಿಚಂದ್ರನ್  ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಬಿ.ವಿ. ನಾಗರತ್ನ ಅವರ ಪೀಠವು ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ಎ.ಜಿ. ಪೆರಾರಿವಾಲನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಎಲ್ಲರ ವಿಷಯದಲ್ಲಿ ಅನ್ವಯಿಸುತ್ತದೆ ಎಂದು ಹೇಳಿ, ಅಪರಾಧಿಗಳಾದ ನಳಿನಿ, ಸಂತನ್‌, ಮುರುಗನ್‌, ಶ್ರೀಹರನ್‌, ರಾಬರ್ಟ್‌ ಪಾಯಸ್‌ ಮತ್ತು ರವಿಚಂದ್ರನ್‌ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಪೀಠವು ಆದೇಶ ನೀಡಿದೆ.

ರಾಜೀವ್ ಗಾಂಧಿ ಮತ್ತು ಇತರ 21 ಜನರ ಹತ್ಯೆಗೆ ಕಾರಣವಾಗಿದ್ದ ಬಾಂಬ್ ದಾಳಿಯ ಸ್ಥಳದಲ್ಲಿ ಹಾಜರಿದ್ದ ಪ್ರಕರಣದಲ್ಲಿ ಹೆಸರಿಸಲಾದ ಪ್ರಮುಖ ಆರೋಪಿಗಳು ಸಲ್ಲಿಸಿದ ಮನವಿಯ ವಿಚಾರಣೆಯ ವೇಳೆ ‘ಯಾವುದೇ ಪ್ರಕರಣದಲ್ಲಿ ಅಗತ್ಯವಿಲ್ಲದಿದ್ದಲ್ಲಿ ಎಲ್ಲ ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗುವುದು’ ಎಂದು ನ್ಯಾಯಾಲಯ ಹೇಳಿದೆ.

ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ, ಮೇ 18 ರಂದು ಸುಪ್ರೀಂ ಕೋರ್ಟ್ 30 ವರ್ಷಗಳ ಕಾಲ ಜೈಲಿನಲ್ಲಿ ಕಾಲ ಕಳೆದ ಪೆರಾರಿವಾಲನ್ ನನ್ನು ಬಿಡುಗಡೆ ಮಾಡಲು ಆದೇಶ ನೀಡಿತ್ತು.

ಪ್ರಕರಣದ ಹಿನ್ನೆಲೆ

1991,ಮೇ 21ರ ರಾತ್ರಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ಸಮಾವೇಶದಲ್ಲಿ ಧನು ಎಂದು ಗುರುತಿಸಲ್ಪಟ್ಟ ಮಹಿಳಾ ಆತ್ಮಾಹುತಿ ಬಾಂಬರ್‌ ಗಾಂಧಿಯವರನ್ನು ಹತ್ಯೆ ಮಾಡಿದ್ದಳು.

1998 ರಲ್ಲಿ ಹತ್ಯೆ ಪ್ರಕರಣದಲ್ಲಿ 25 ಮಂದಿ ಆರೋಪಿಗಳಿಗೆ ಟಾಡಾ ಕೋರ್ಟ್ ನಲ್ಲಿ ಶಿಕ್ಷೆಯಾಗಿತ್ತು. 19 ಮಂದಿಯನ್ನು ಸುಪ್ರೀಂ ಕೋರ್ಟ್ ಖುಲಾಸೆಗೊಳಿಸಿತ್ತು. ನಾಲ್ಕು ಮಂದಿ ಅಪರಾಧಿಗಲಾದ ಪೆರಿವಾಲನ್, ಶ್ರೀಹರನ್, ಸಂತನ್ ಮತ್ತು ನಳಿನಿಗೆ ಮರಣ ದಂಡನೆ ವಿಧಿಸಲಾಗಿತ್ತು. 2000 ರಲ್ಲಿ ನಳಿನಿ ಶಿಕ್ಷೆಯನ್ನು ಜೇವಾವಧಿಯನ್ನಾಗಿ ಬದಲಾಯಿಸಲಾಗಿತ್ತು.2014 ರಲ್ಲಿ ಪೆರಿವಾಲನ್ ಶಿಕ್ಷೆಯನ್ನು ಜೀವಾವಧಿಯನ್ನಾಗಿ ಬದಲಾಯಿಸಲಾಗಿತ್ತು.

2018 ರಲ್ಲಿ ಎಐಎಡಿಎಂ ಕೆ ಸರಕಾರ ಏಳು ಮಂದಿ ಆರೋಪಿಗಳ ಬಿಡುಗಡೆಗೆ ಮುಂದಾಗಿತ್ತು. ಆದರೆ ರಾಜ್ಯಪಾಲರು ಅಧಿಕಾರಿಗಳಿಗೆ ಅಪರಾಧಿಗಳ ಬಿಡುಗಡೆಗೆ ಅವಕಾಶ ಮಾಡಿಕೊಟ್ಟಿರಲಿಲ್ಲ. ಮದ್ರಾಸ್ ಹೈಕೋರ್ಟ್ ಕೂಡ ಅವಧಿ ಪೂರ್ವ ಬಿಡುಗಡೆಗಾಗಿ ಪೆರಿವಾಲನ್, ನಳಿನಿ ಸಲ್ಲಿಸಿದ್ದ ಮನವಿಯನ್ನು ತಳ್ಳಿ ಹಾಕಿತ್ತು.

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.