ಎಸ್ಸಿ, ಎಸ್ಟಿ ಕಾಯ್ದೆ ತೀರ್ಪು ಕಾಯ್ದಿಟ್ಟ ಸುಪ್ರೀಂ
Team Udayavani, May 2, 2019, 6:11 AM IST
ಹೊಸದಿಲ್ಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕಾಯ್ದೆ ಅಡಿಯಲ್ಲಿ ಅಧಿಕಾರಿಗಳ ಬಂಧನದಿಂದ ರಕ್ಷಣೆ ನೀಡಿದ ಸುಪ್ರೀಂಕೋರ್ಟ್, 2018 ಮಾರ್ಚ್ 20ರ ತೀರ್ಪಿನ ಮರುಪರಿಶೀಲನೆ ತೀರ್ಪನ್ನು ಕಾಯ್ದಿರಿಸಿದೆ.
ಕಾನೂನುಗಳು ಜಾತಿ ಆಧಾರಿತವಾಗಿರಬಾರದು ಮತ್ತು ಸಮಾನವಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಇದೇ ವೇಳೆ ಅಭಿಪ್ರಾಯ ವ್ಯಕ್ತಪಡಿಸಿದೆ.
ತೀರ್ಪಿನಲ್ಲಿ ಯಾವುದೇ ತಪ್ಪಾಗಿದ್ದರೆ, ಅದನ್ನು ಮರುಪರಿಶೀಲನೆ ಅರ್ಜಿ ಸಲ್ಲಿಸಿ ಸರಿಪಡಿಸಬಹುದಾಗಿದೆ ಎಂದಿದೆ. ನ್ಯಾಯಮೂರ್ತಿ ಅರುಣ್ ಮಿಶ್ರಾ ಮತ್ತು ಯು.ಯು. ಲಲಿತ್ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿದ್ದು, ಎರಡೂ ಪಕ್ಷಗಳ ವಿಚಾರಣೆಯನ್ನು ಆಲಿಸಿದ ನಂತರ ತೀರ್ಪು ಕಾಯ್ದಿರಿಸಿರುವುದಾಗಿ ಘೋಷಿಸಿದೆ.