ನ್ಯಾಯಾಧೀಶರ ವಿರುದ್ಧ ಅಶ್ಲೀಲ ಪದ ಬಳಸಿ ಆರೋಪ: ಮೂವರಿಗೆ ಜೈಲುಶಿಕ್ಷೆ ವಿಧಿಸಿದ ಸುಪ್ರೀಂ
ಸುಪ್ರೀಂಕೋರ್ಟ್ ಪೀಠದ ಜಸ್ಟೀಸ್ ದೀಪಕ್ ಗುಪ್ತಾ ಮತ್ತು ಅನಿರುದ್ಧ ಬೋಸ್ ಪ್ರಕರಣದ ವಿಚಾರಣೆ ನಡೆಸಿದ್ದರು.
Team Udayavani, May 6, 2020, 7:37 PM IST
ನವದೆಹಲಿ: ಸುಪ್ರೀಂಕೋರ್ಟ್ ನ ಇಬ್ಬರು ಜಡ್ಜ್ ಗಳ ವಿರುದ್ಧ ಅಶ್ಲೀಲವಾಗಿ ಹಾಗೂ ಅವಹೇಳನಕಾರಿಯಾಗಿ ಆರೋಪಿಸಿದ್ದ ಪ್ರಕರಣದಲ್ಲಿ ಮೂವರಿಗೆ ಸುಪ್ರೀಂಕೋರ್ಟ್ ಜೈಲುಶಿಕ್ಷೆ ವಿಧಿಸಿರುವ ಘಟನೆ ವರದಿಯಾಗಿದೆ.
ನ್ಯಾಯಾಧೀಶರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ನ್ಯಾಯಾಂಗ ನಿಂದನೆಗೆ ಗುರಿಯಾಗಿದ್ದ ಮಹಾರಾಷ್ಟ್ರ ಮತ್ತು ಗೋವಾ ಇಂಡಿಯನ್ ಬಾರ್ ಅಸೋಸಿಯೇಶನ್ ವಕೀಲ ವಿಜಯ್ ಕುರ್ಲೆ, ಇಂಡಿಯನ್ ಬಾರ್ ಅಸೋಸಿಯೇಶನ್ ಅಧ್ಯಕ್ಷ, ವಕೀಲ ನೀಲೇಶ್ ಓಜಾ ಹಾಗೂ ಮಾನವಹಕ್ಕು ಭದ್ರತಾ ಮಂಡಳಿಯ ರಾಷ್ಟ್ರೀಯ ಕಾರ್ಯದರ್ಶಿ ರಶೀದ್ ಖಾನ್ ಪಠಾಣ್ ಗೆ ಮೂರು ತಿಂಗಳ ಜೈಲುಶಿಕ್ಷೆ ವಿಧಿಸಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಮೇ 4ರಂದು ಸುಪ್ರೀಂಕೋರ್ಟ್ ಪೀಠದ ಜಸ್ಟೀಸ್ ದೀಪಕ್ ಗುಪ್ತಾ ಮತ್ತು ಅನಿರುದ್ಧ ಬೋಸ್ ಪ್ರಕರಣದ ವಿಚಾರಣೆ ನಡೆಸಿದ್ದರು. ನ್ಯಾಯಾಧೀಶರ ವಿರುದ್ಧ ಕೀಳುಮಟ್ಟದ ಭಾಷೆ ಬಳಸಿ ಹೇಳಿಕೆ ನೀಡಿದ್ದು, ಈ ಬಗ್ಗೆ ಕಿಂಚಿತ್ತೂ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ. ಹೀಗಾಗಿ ಈ ವಿಚಾರದಲ್ಲಿ ಸಹಾನುಭೂತಿ ತೋರಿಸುವುದಿಲ್ಲ ಎಂದು ಪೀಠ ತಿಳಿಸಿದೆ.
ವಿಜಯ್ ಕುರ್ಲೆ, ನೀಲೇಶ್ ಓಜಾ ಮತ್ತು ರಶೀದ್ ಖಾನ್ ಗೆ ಮೂವರು ತಿಂಗಳ ಜೈಲುಶಿಕ್ಷೆ ಹಾಗೂ ತಲಾ 2 ಸಾವಿರ ರೂಪಾಯಿ ದಂಡ ವಿಧಿಸಿರುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?