ಸಚಿವ ಗೋಯಲ್ ಮಾಡಿಸಿದ ಸಮೀಕ್ಷೆ : ಬಿಜೆಪಿಗೆ ಎಷ್ಟು ಸೀಟ್ ಗೊತ್ತಾ ?
Team Udayavani, Nov 18, 2018, 12:06 PM IST
ಹೊಸದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಯ ಕುರಿತಾಗಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಬೃಹತ್ ಸಮೀಕ್ಷೆಯೊಂದನ್ನು ಮಾಡಿಸಿದ್ದು, ಬಿಜೆಪಿಗೆ 297 ರಿಂದ 303 ಸ್ಥಾನಗಳು ಲಭ್ಯವಾಗಲಿದೆ ಎಂದು ಸಮೀಕ್ಷಾ ವರದಿ ಹೇಳಿದೆ.
ದೇಶಾದ್ಯಂತ 5.4 ಲಕ್ಷ ಮತದಾರರ ಅಭಿಪ್ರಾಯ ಆಧರಿಸಿದ ದೊಡ್ಡ ಸಮೀಕ್ಷೆಯಲ್ಲಿ ಈ ಅಂಶ ತಿಳಿದು ಬಂದಿದೆ ಎಂದು ಶನಿವಾರ ಗೋಯಲ್ ಹೇಳಿದ್ದಾರೆ.
ಇದೇ ರೀತಿಯ ಸರ್ವೇಯನ್ನು 2013 ರಲ್ಲಿ ಗೋಯಲ್ ಅವರು ಮಾಡಿಸಿ ಬಿಜೆಪಿಗೆ ಸ್ಪಷ್ಟ ಬಹುಮತ ದೊರಕುತ್ತದೆ ಎಂದು ಹೇಳಿದ್ದರು. ಅದು ನಿಜವಾಗಿತ್ತು ಕೂಡ.
ಈ ಸರ್ವೇಯನ್ನು ಬಿಜೆಪಿ ಮಾಡದೇ ಖಾಸಗಿ ಸಂಸ್ಥೆಯೊಂದರ ಮೂಲಕ ಮಾಧ್ಯಮಗಳನ್ನು ಬಳಸಿಕೊಂಡು ಮಾಡಿಸಲಾಗಿದೆ.
2014 ರಲ್ಲಿ ಬಿಜೆಪಿ 282 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದಿತ್ತು. ಎನ್ಡಿಎ ಮೈತ್ರಿಕೂಟ 336 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ