ಭೀಕರ ಅಪಘಾತ : ಬೈಕ್ ಸವಾರನನ್ನು 100 ಮೀ. ದೂರ ಎಳೆದೊಯ್ದ ಐಷಾರಾಮಿ ಕಾರು
Team Udayavani, Sep 20, 2022, 11:39 AM IST
ನವದೆಹಲಿ : ಐಷಾರಾಮಿ ಕಾರೊಂದು ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿ ನಿಂತಿದ್ದ ವಾಹನಗಳಿಗೆ ಢಿಕ್ಕಿ ಹೊಡೆದು ಬಳಿಕ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದು ಸುಮಾರು 100 ಮೀಟರ್ ದೂರ ಎಳೆದೊಯ್ದ ಘಟನೆ ದೆಹಲಿಯ ಕರೋಲ್ ಬಾಗ್‌ನಲ್ಲಿ ಸೋಮವಾರ ಸಂಜೆ ಸಂಭವಿಸಿದೆ .
ಘಟನೆಯಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ವಾಹನಗಳಿಗೆ ಕಾರು ಢಿಕ್ಕಿ ಹೊಡೆದಿದ್ದು ಘಟನೆಯ ಭೀಕರ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅತೀ ವೇಗ ಹಾಗೂ ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿದ ಪರಿಣಾಮ ಕಾರು ನಿಯಂತ್ರಣ ಕಳೆದುಕೊಂಡು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ, ಅಲ್ಲದೆ ಘಟನೆ ನಡೆದ ರಸ್ತೆಯ ಅಂಚಿನಲ್ಲಿ ಮಹಿಳೆಯೊಬ್ಬರು ನಿಂತಿರುವುದನ್ನು ಕಾಣಬಹುದು. ಈ ವೇಳೆ ಏಕಾಏಕಿ ಕಾರು ನುಗ್ಗಿ ಬಂದಿದೆ ಅದೃಷ್ಟವಶಾತ್ ಮಹಿಳೆ ಪಾರಾಗಿದ್ದಾರೆ.
ಘಟನೆಗೆ ಸಂಬಂಧಿಸಿ ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಉತ್ತರಪ್ರದೇಶ: ನೋಯ್ಡಾದಲ್ಲಿ ಗೋಡೆ ಕುಸಿದು ಬಿದ್ದು ನಾಲ್ವರು ಕಾರ್ಮಿಕರ ಸಾವು
#Delhi | Fortuner rams series of stationary vehicles and drags a man for about 100 meters in #KarolBagh pic.twitter.com/cNgDQWM4wA
— India.com (@indiacom) September 20, 2022