ತಬ್ಲಿಘಿ ಮುಖ್ಯಸ್ಥ ಮೌಲಾನಾ ಸಾದ್ ವಿರುದ್ಧ ಜನಾಂಗೀಯ ಹತ್ಯೆ ಪ್ರಕರಣ ದಾಖಲು
ದೇಶಾದ್ಯಂತ ಇನ್ನೂ ತಲೆಮರೆಸಿಕೊಂಡಿದ್ದಾರೆ 1890 ವಿದೇಶಿ ತಬ್ಲಿಘಿಗಳು!
Team Udayavani, Apr 16, 2020, 6:28 AM IST
ಹೊಸದಿಲ್ಲಿ: ದೆಹಲಿಯ ನಿಜಾಮುದ್ದೀನ್‌ನಲ್ಲಿ ಲಾಕ್ ಡೌನ್‌ನ ನಡುವೆಯೂ ಅತಿ ದೊಡ್ಡ ಧಾರ್ಮಿಕ ಸಮಾವೇಶ ನಡೆಸಿದ್ದ ‘ತಬ್ಲೀಘಿ -ಎ-ಜಮಾತ್’ ಸಂಘಟನೆಯ ಮುಖ್ಯಸ್ಥ ಮೌಲಾನಾ ಸಾದ್ ವಿರುದ್ಧ ‘ಶಿಕ್ಷಾರ್ಹವಾದ ಜನಾಂಗೀಯ ಹತ್ಯೆ’ ಪ್ರಕರಣವನ್ನು ದೆಹಲಿ ಪೊಲೀಸರು ದಾಖಲಿಸಿದ್ದಾರೆ.
ಇದಲ್ಲದೆ, ಸಮಾವೇಶಕ್ಕಾಗಿ ವಿದೇಶಗಳಿಂದ ಬಂದು ಇನ್ನೂ ಭಾರತದಲ್ಲೇ ತಲೆ ಮರೆಸಿಕೊಂಡಿರುವ 1,890 ತಬ್ಲೀಘಿಗಳ ವಿರುದ್ಧ ಲುಕ್ ಔಟ್ ಅಧಿಸೂಚನೆ ಜಾರಿಗೊಳಿಸಲಾಗಿದೆ.
ಮಾರ್ಚ್ ಮಧ್ಯಭಾಗದಲ್ಲಿ ನಡೆದಿದ್ದ ಈ ಸಮಾವೇಶದಲ್ಲಿ ಭಾಗಿಯಾಗಿದ್ದ 9000 ತಬ್ಲೀಘಿ ಸದಸ್ಯರಿಂದ ದೇಶದಲ್ಲಿ ಕೋವಿಡ್ ಸೋಂಕು ಮತ್ತಷ್ಟು ವೇಗವಾಗಿ ಹರಡಲು ಕಾರಣವಾಯಿತು. ಈ ಹಿನ್ನೆಲೆಯಲ್ಲಿ, ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಈ ನಡುವೆ, ನಿಜಾಮುದ್ದೀನ್ ಸಮಾವೇಶದಲ್ಲಿ 2041 ವಿದೇಶಿಗರು ಭಾಗವಹಿಸಿದ್ದರು ಎಂದು ಹೇಳಲಾಗಿದೆ. ಇವರಲ್ಲಿ 9 ಮಂದಿ ಚೀನದವರೆಂದೂ ವಾಹಿನಿಯೊಂದು ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಾಸಿಗೆಗಾಗಿ ಆನೆಯ ಕಿತ್ತಾಟ -ವಿಡಿಯೋ ವೈರಲ್
ಮತ್ತೆ ಆರೆಂಜ್ ಅಲರ್ಟ್; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ರಾಮ ಮಂದಿರ ಅಡಿಪಾಯ ಆಗಸ್ಟ್ಗೆ ಸಂಪೂರ್ಣ : ಫೆಬ್ರವರಿಯಲ್ಲಿ ಆರಂಭವಾಗಿದ್ದ ಕಾಮಗಾರಿ
ಪತ್ನಿಗೆ ಸೀರೆ ಉಡಲು ಬರುವುದಿಲ್ಲ: ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ !
ಮುಸ್ಲಿಮರ ವಿರುದ್ಧ ದ್ವೇಷ ಭಾಷಣ: ಜಿತೇಂದ್ರ ತ್ಯಾಗಿಗೆ ಜಾಮೀನು