ಮೋದಿಗೆ ರಾಹುಲ್ 7ನೇ ಪ್ರಶ್ನೆ: ನಿಮ್ಮದು ಶ್ರೀಮಂತರ ಸರ್ಕಾರವಾ ?
Team Udayavani, Dec 5, 2017, 11:57 AM IST
ಹೊಸದಿಲ್ಲಿ : ಗುಜರಾತ್ ಚುನವಾಣೆ ಸಂಬಂಧವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತನ್ನ ಪ್ರಶ್ನೆಗಳ ಸರಣಿಯನ್ನು ಮುಂದುವರಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಂದು ಈ ಸರಣಿಯ 7ನೇ ಪ್ರಶ್ನೆಯನ್ನು ಕೇಳಿದ್ದಾರೆ.
ಕೇಂದ್ರದಲ್ಲಿ ಅಧಿಕಾರರೂಢವಾಗಿರುವ ಭಾರತೀಯ ಜನತಾ ಪಕ್ಷ ನೇತೃತ್ವದ ಸರಕಾರ ಕೇವಲ ಶ್ರೀಮಂತರಿಗೆ ಮಾತ್ರವೇ ಸೇವೆ ಸಲ್ಲಿಸುತ್ತಿದೆಯೇ ಎಂದು ರಾಹುಲ್ ತನ್ನ 7ನೇ ಪ್ರಶ್ನೆಯಲ್ಲಿ ವ್ಯಂಗ್ಯವಾಡಿದ್ದಾರೆ.
“ಏರುತ್ತಿರುವ ಅಗತ್ಯ ವಸ್ತುಗಳ ಬೆಲೆಗಳು ಜನಸಾಮಾನ್ಯರ ಜೀವನವನ್ನು ದುರ್ಭರಗೊಳಿಸಿದೆ. ನೋಟ್ ಬಂದಿ ಮತ್ತು ಜಿಎಸ್ಟಿ ಬಳಿಕ ಮೋದಿ ಸರಕಾರ ಕೇವಲ ಜುಮ್ಲಾ ಸರಕಾರವಾಗಿದೆ. ಜನಸಾಮಾನ್ಯರನ್ನು ನಿರ್ಲಕ್ಷಿಸಿದ ಸಿರಿವಂತರ ಸರಕಾರವಾಗಿದೆ’ ಎಂದು ರಾಹುಲ್ ತಮ್ಮ ಟ್ವಿಟರ್ ಬರಹದಲ್ಲಿ ಟೀಕಿಸಿದರು.
ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಡಿ.9ರಂದು ಮತ್ತು 2ನೇ ಹಂತದ ಚುನಾವಣೆ ಡಿ.14ರಂದು ನಡೆಯಲಿದೆ. ಡಿ.18ರಂದು ಹಿಮಾಚಲ ಪ್ರದೇಶ ಮತ್ತು ಗುಜರಾತ್ ಚುನಾವಣೆಗಳ ಮತ ಎಣಿಕೆ ಜತೆಜತೆಗೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ