ತಮಿಳುನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, 8 ಸಾವು
Team Udayavani, Jul 29, 2023, 11:43 PM IST
ಕೃಷ್ಣಗಿರಿ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿನ ಫಝಯಪೆಟ್ಟಯ್, ಬೊಗನಪಲ್ಲಿ ಹಳ್ಳಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟವೊಂದು ಸಂಭವಿಸಿ 8 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಮೂವರು ಮಹಿಳೆಯರೂ ಸೇರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಘಟನೆಗೆ ಸಂತಾಪ ಸೂಚಿಸಿ, ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.
ಗಾಯಗೊಂಡವರು ತಲಾ 50,000 ರೂ. ಪಡೆಯಲಿದ್ದಾರೆ. ಘಟನೆಯಿಂದ ತಾನು ನೊಂದಿದ್ದೇನೆ, ಮೃತರ ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಸದ್ಯ ತಮಿಳುನಾಡು ಪ್ರವಾಸದಲ್ಲಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡ ಸಂತಾಪ ಸೂಚಿಸಿದ್ದಾರೆ. ಇನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಪರಿಸ್ಥಿತಿಯನ್ನು ನಿಭಾಯಿಸಲು ಆಹಾರ ಮಂತ್ರಿ ಆರ್.ಚಕ್ರಪಾಣಿಯನ್ನು ನಿಯೋಜಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ