
ಕೋವಿಡ್ ಹೆಚ್ಚಳ: ತಮಿಳುನಾಡಿನ ಆಸ್ಪತ್ರೆಗಳಲ್ಲಿ ಮಾಸ್ಕ್ ಕಡ್ಡಾಯ
Team Udayavani, Apr 1, 2023, 1:40 PM IST

ಚೆನ್ನೈ: ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡುವವರಿಗೆ ಮಾಸ್ಕ್ ಕಡ್ಡಾಯಗೊಳಿಸಿ ತಮಿಳುನಾಡು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಭಾರತದಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್ ಹೆಚ್ಚಾಗುತ್ತಿದೆ. ಇತ್ತೀಚೆಗೆ ಕೋವಿಡ್ ಪ್ರಕರಣಗಳ ಸಂಖ್ಯೆ 3 ಸಾವಿರ ಗಡಿದಾಟಿತ್ತು. ಕೋವಿಡ್ ಸೋಂಕು ಹರಡುವಿಕೆಯಿಂದ ಜನರನ್ನು ರಕ್ಷಿಸುವ ಸಲುವಾಗಿ ತಮಿಳುನಾಡು ಸರ್ಕಾರ ಆಸ್ಪತ್ರೆಗೆ ಹೋಗುವವರಿಗೆ ಮಾಸ್ಕ್ ಕಡ್ಡಾಯವಾಗಿ ಧರಿಸುವಂತೆ ಅದೇಶ ಹೊರಡಿಸಿದೆ.
ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ಮಾ ಸುಬ್ರಮಣಿಯನ್, ಸರ್ಕಾರದ ಆದೇಶವು ಮುಂಚೂಣಿಯಲ್ಲಿರುವ ಕಾರ್ಮಿಕರು ಮತ್ತು ನಿವಾಸಿಗಳನ್ನು ಸೋಂಕಿನಿಂದ ರಕ್ಷಿಸುವ ಗುರಿಯನ್ನು ಹೊಂದಿದೆ. ವೈದ್ಯರು, ದಾದಿಯರು, ವೈದ್ಯಕೀಯ ಸಿಬ್ಬಂದಿ, ರೋಗಿಗಳು ಮತ್ತು ಸಂದರ್ಶಕರಿಗೆ ಮಾಸ್ಕ್ ಕಡ್ಡಾಯವಾಗಿ ಧರಿಸಲು ಸೂಚನೆ ನೀಡಲಾಗಿದೆ ಎಂದರು.
ಇದನ್ನೂ ಓದಿ: ಮೊದಲ ಪಂದ್ಯದಲ್ಲೇ ಗಾಯ: ಕೂಟದಿಂದಲೇ ಹೊರಬಿದ್ದರೆ ಕೇನ್ ವಿಲಿಯಮ್ಸನ್?
ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಮಾಸ್ಕ್ ಗಳನ್ನು ಧರಿಸಬೇಕು. ಪ್ರಸ್ತುತ ತಮಿಳುನಾಡು ಮಾತ್ರವಲ್ಲದೆ ಭಾರತದ ಹಲವು ಕಡೆ ಕೋವಿಡ್ ರೂಪಂತಾರ ವೈರಾಣು ಹರಡಿದೆ. ಇತರ ದೇಶಗಳಿಂದ ಆಗಮಿಸುವ ಪ್ರಯಾಣಿಕರು ರಾಜ್ಯದ ವಿಮಾನ ನಿಲ್ದಾಣಗಳಿಗೆ ಆಗಮಿಸಿದ ನಂತರ ಸ್ಕ್ರೀನಿಂಗ್ ಗೆ ಒಳಗಾಗಬೇಕು. ಕಳೆದ 24 ಗಂಟೆಗಳಲ್ಲಿ ತಮಿಳುನಾಡಿನಲ್ಲಿ 123 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ ಎಂದು ಹೇಳಿದರು.
ಕಳೆದ ಕೆಲ ದಿನಗಳಿಂದ ಕೋವಿಡ್ ಪ್ರಕರಣಗಳು ನಿಧಾನವಾಗಿ ಹೆಚ್ಚಾಗುತ್ತಿದೆ. ಈ ನಡುವೆ ತಮಿಳುನಾಡಿನಲ್ಲಿ ಆಸ್ಪತ್ರೆಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸುವ ಆದೇಶವನ್ನು ಹೊರಡಿಸಲಾಗಿದೆ.
ಶನಿವಾರ (ಏ.1 ರಂದು) ಭಾರತದಲ್ಲಿ 2,994 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ

Missing: ಕಾಂಗ್ರೆಸ್ ಟ್ವೀಟ್ ಗೆ ಕಟುವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ

ಅಹ್ಮದ್ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್ ಶಿಂಧೆ

Gyanvapi Case: ಮಸೀದಿ ಸಮಿತಿಯ ಸವಾಲು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್