ಸರಕಾರಿ ಶಾಲೆಯೊಳಗೆ ಅನೈತಿಕ ಚಟುವಟಿಕೆ; ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಶಿಕ್ಷಕ

Team Udayavani, Sep 11, 2019, 1:53 PM IST

ಚೆನ್ನೈ: ಶಾಲಾ ಶಿಕ್ಷಕ ಅಂಗನವಾಡಿ ಸಿಬ್ಬಂದಿ ಜತೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದಾಗಲೇ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದು, ಆಕ್ರೋಶಗೊಂಡ ಸ್ಥಳೀಯರು ಶಿಕ್ಷಕನನ್ನು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ತಮಿಳುನಾಡಿನ ಸರಕಾರಿ ಶಾಲೆಯಲ್ಲಿ ನಡೆದಿದೆ.

ನಾಮಕ್ಕಲ್ ನ ಉದುಪ್ಪಂ ಸರಕಾರಿ ಶಾಲೆಯ ಶಿಕ್ಷಕ ಸಂಜೆ ತರಗತಿ ಮುಗಿದ ನಂತರ ಅಂಗನವಾಡಿ ಕೆಲಸದಾಕೆಯ ಜತೆ ಸರಸ ಸಲ್ಲಾಪದಲ್ಲಿ ತೊಡಗಿದ್ದಾಗಲೇ ಗ್ರಾಮಸ್ಥರ ಕೈಗೆ ಸಿಕ್ಕಿಹಾಕಿಕೊಂಡಿದ್ದರು. ಕಳೆದ ಕೆಲವು ತಿಂಗಳಿನಿಂದ ಇಬ್ಬರ ನಡುವೆ ಸಂಬಂಧ ಇದ್ದಿರುವುದಾಗಿ ವರದಿ ತಿಳಿಸಿದೆ.

ಗ್ರಾಮೀಣ ಶಿಶು ರಕ್ಷಣಾಭಿವೃದ್ಧಿ ಇಲಾಖೆಯ ಸಹಭಾಗಿತ್ವದೊಂದಿಗೆ ಮಹಿಳೆ ಅಂಗನವಾಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಿರುವುದಾಗಿ ವರದಿ ಹೇಳಿದೆ. ಶಾಲೆ ಮುಗಿದ ನಂತರ ಇವರಿಬ್ಬರ ಕಳ್ಳಾಟಿಕೆಯನ್ನು ಶಾಲೆಯ ವಿದ್ಯಾರ್ಥಿಗಳು ಕಂಡಿದ್ದು, ಪೋಷಕರಿಗೆ ತಿಳಿಸಿರುವುದಾಗಿ ವರದಿ ವಿವರಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಇಬ್ಬರೂ ಮಕ್ಕಳ ಪೋಷಕರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವುದಾಗಿ ವರದಿ ತಿಳಿಸಿದೆ. ಶಿಕ್ಷಕನ ವಿರುದ್ಧ ಸೂಕ್ತ ಶಿಸ್ತುಕ್ರಮ ಕೈಗೊಳ್ಳುವುದಾಗಿ ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ