ಮಾಹಿತಿಗೆ ತೆರಿಗೆ ಮಂಡಳಿ, ಸರ್ಕಾರದ ನಡುವೆ ಒಪ್ಪಂದ
Team Udayavani, Sep 15, 2017, 7:45 AM IST
ನವದೆಹಲಿ: ಕಪ್ಪುಹಣ ಕುಳಗಳನ್ನು ಮಣಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತೂಂದು ಹೆಜ್ಜೆ ಇರಿಸಿದೆ. ಕೇಂದ್ರ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಒಪ್ಪಂದಕ್ಕೆ ಸಹಿ ಹಾಕಿವೆ. ಅದರ ಪ್ರಕಾರ ಪ್ಯಾನ್ ಸಂಖ್ಯೆ ಮತ್ತು ಇತರ ತೆರಿಗೆ ಸಂಬಂಧಿ ಮಾಹಿತಿಗಳನ್ನು ವಿನಿಮಯ ಮಾಡಲಾಗುತ್ತದೆ. ಈ ಮೂಲಕ ನಕಲಿ ಕಂಪನಿಗಳು ನಡೆಸುವ ಹಣದ ಅಕ್ರಮ ವಹಿವಾಟುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಲು ಸಾಧ್ಯವಾಗಲಿದೆ.
ಸ್ವಯಂ ಚಾಲಿತವಾಗಿ ಮತ್ತು ನಿಯಮಿತ ಅವಧಿಯಲ್ಲಿ ಮಾಹಿತಿ ವಿನಿಮಯವಾಗುತ್ತದೆ ಎಂದು ಮೂಲಗಳು ನವದೆಹಲಿಯಲ್ಲಿ ತಿಳಿಸಿವೆ. ಅದರ ಪ್ರಕಾರ ಕಂಪನಿಗಳ ಅಡಿಟ್ ಮಾಹಿತಿಯನ್ನು ತೆರಿಗೆ ಅಧಿಕಾರಿಗಳು ಪಡೆದುಕೊಳ್ಳಲಿದ್ದಾರೆ. ಇದರ ಜತೆಗೆ ಪ್ಯಾನ್ ಕಾರ್ಡ್ ವಿವರಗಳನ್ನು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯಕ್ಕೆ ನೀಡಲಾಗುತ್ತದೆ. ಕಂಪನಿಗಳ ರಿಜಿಸ್ಟ್ರಾರ್ರಿಂದ ಆಯಾ ಕಂಪನಿಗಳಿಗೆ ಸಂಬಂಧಿಸಿದ ಹಣಕಾಸು ವರದಿಯನ್ನು ಪಡೆದುಕೊಂಡು ಪರಿಶೀಲನೆಗೆ ಅವಕಾಶ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ