ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿ; ಭುಗಿಲೆದ್ದ ಪ್ರತಿಭಟನೆ, ಟಿಡಿಪಿ ಸಂಸದ ಗಲ್ಲಾ ಬಂಧನ

ಜಯದೇವ್ ಗಲ್ಲಾ ಅವರನ್ನು ಮಂಗಳಾಗಿರಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದು, ಜನವರಿ 31ವರೆಗೆ ಕಸ್ಟಡಿಗೆ ಒಪ್ಪಿಸಿದೆ.

Team Udayavani, Jan 21, 2020, 12:26 PM IST

ಹೈದರಾಬಾದ್: ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿಯನ್ನಾಗಿಸುವ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಆಂಧ್ರಪ್ರದೇಶ ವಿಕೇಂದ್ರಿಕರಣ ಮಸೂದೆಯನ್ನು ಅಂಗೀಕರಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಟಿಡಿಪಿ ಸಂಸದ ಜಯದೇವ್ ಗಲ್ಲಾ ಅವರನ್ನು ಪೊಲೀಸರು ಬಂಧಿಸಿರುವುದಾಗಿ ವರದಿ ತಿಳಿಸಿದೆ.

ಅಮರಾವತಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಪೊಲೀಸರು ಮತ್ತು ಗಲ್ಲಾ ನಡುವೆ ನಡೆದ ಘರ್ಷಣೆಯ ಹಿನ್ನೆಲೆಯಲ್ಲಿ ಗಲ್ಲಾ ವಿರುದ್ಧ ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿರುವುದಾಗಿ ವರದಿ ವಿವರಿಸಿದೆ.

ಸೋಮವಾರ ಮಧ್ಯರಾತ್ರಿ ಜಯದೇವ್ ಗಲ್ಲಾ ಅವರನ್ನು ಮಂಗಳಾಗಿರಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದು, ಜನವರಿ 31ವರೆಗೆ ಕಸ್ಟಡಿಗೆ ಒಪ್ಪಿಸಿರುವುದಾಗಿ ವರದಿ ತಿಳಿಸಿದೆ. ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಆಂಧ್ರಪ್ರದೇಶ ವಿಕೇಂದ್ರಿಕರಣ ಮಸೂದೆಯನ್ನು ಪಾಸ್ ಮಾಡಿರುವುದನ್ನು ವಿರೋಧಿಸಿ ಆಂಧ್ರಪ್ರದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ.

ಆಂಧ್ರಪ್ರದೇಶ ಮೂರು ಭಾಗ ಮಾಡಿ ಮೂರು ರಾಜಧಾನಿ ನಿರ್ಮಾಣ ಮಾಡುವುದರಿಂದ ಮುಂದಿನ ಪೀಳಿಗೆಗೆ ಹೊರೆಯಾಗಲಿದೆ. ಆರ್ಥಿಕ ಹೊರೆ ಭರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ತಾನು ಹೋರಾಟ ಮಾಡುತ್ತಿರುವುದಾಗಿ ಸಂಸದ ಜಯದೇವ್ ಗಲ್ಲಾ ತಿಳಿಸಿರುವುದಾಗಿ ವರದಿ ಹೇಳಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ