ಹೆಚ್ಚಿನ ನಗದು ವಿಥ್‌ಡ್ರಾ ಕೊರತೆಗೆ ಕಾರಣ: ಕೇಂದ್ರ

Team Udayavani, Apr 20, 2018, 9:37 AM IST

No-Cash-19-4.jpg

ನವದೆಹಲಿ: ಅಗತ್ಯಕ್ಕಿಂತ ಹೆಚ್ಚು ನಗದು ಹಿಂಪಡೆದಿರುವುದೇ ಸದ್ಯ ಉಂಟಾಗಿರುವ ಕೊರತೆಗೆ ಕಾರಣ ಎಂದು ಕೇಂದ್ರ ಸರ್ಕಾರ ಕಂಡುಕೊಂಡಿದೆ. ಆರಂಭದಲ್ಲಿ ಈ ಕೊರತೆ ಕಾಣಿಸಿಕೊಂಡದ್ದು ತೆಲಂಗಾಣದಲ್ಲಿ, ನಂತರ ಉತ್ತರ ಕರ್ನಾಟಕ, ಬಳಿಕ ಆಂಧ್ರಪ್ರದೇಶದಲ್ಲಿ ಈ ಕೊರತೆ ಕಾಣಿಸಿಕೊಂಡಿತ್ತು ಎಂದು ಮೂಲಗಳನ್ನು ಉಲ್ಲೇಖೀಸಿ ‘ಇಂಡಿಯಾ ಟುಡೇ’ ವರದಿ ಮಾಡಿದೆ. ಸಾರ್ವಜನಿಕರು ಎಟಿಎಂಗಳಿಂದ ಅಗತ್ಯಕ್ಕಿಂತ ಹೆಚ್ಚು ನಗದು ವಿಥ್‌ ಡ್ರಾ ಮಾಡಿದ್ದರಿಂದ ಈ ಕೊರತೆ ಉಂಟಾಗಿದೆ ಎಂಬ ವಾದವನ್ನು ಸರ್ಕಾರ ಒಪ್ಪಿಕೊಂಡಿಲ್ಲ.

ಇದೇ ವೇಳೆ ಆದಾಯ ತೆರಿಗೆ ಕಂಡುಕೊಂಡ ಮಾಹಿತಿ ಪ್ರಕಾರ ದಕ್ಷಿಣದ ಮೂರು ರಾಜ್ಯಗಳಲ್ಲಿರುವ ಗುತ್ತಿಗೆದಾರರು, ವ್ಯಾಪಾರಸ್ಥರು, ಕೃಷಿ ಸಂಬಂಧಿತ ಉದ್ಯಮಿಗಳು ಮಾರ್ಚ್‌ ತಿಂಗಳ ಎರಡನೇ ವಾರದಿಂದ ಭಾರಿ ಪ್ರಮಾಣದಲ್ಲಿ ಚೆಕ್‌ ಮತ್ತು ಇತರ ಮಾರ್ಗದ ಮೂಲಕ ಪಾವತಿ ಮಾಡಲು ಆರಂಭಿಸಿದ್ದರು ಎಂದು ಮೂಲಗಳು ಹೇಳಿವೆ. ಅದಕ್ಕೆ ಪೂರಕವಾಗಿ ತೆರಿಗೆ ಇಲಾಖೆ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ಕಾರ್ಯಚರಣೆ ನಡೆಸಿತ್ತು. ಈ ಹಂತದಲ್ಲಿ ಉದ್ಯಮಿಯೊಬ್ಬರು ಕೆಲವೇ ಗಂಟೆಗಳ ಅವಧಿಯಲ್ಲಿ 20 ಬಾರಿ ಅತ್ಯಧಿಕ ಮೊತ್ತವನ್ನು ಪಾವತಿ ಮಾಡಿದ್ದ ವಿಚಾರ ಬೆಳಕಿಗೆ ಬಂದಿದೆ.

POSನಲ್ಲಿ 2 ಸಾವಿರ ಶುಲ್ಕ ರಹಿತ ವಿತ್‌ಡ್ರಾ : ನಗದು ಕೊರತೆ ನೀಗಲು ಎಸ್‌ಬಿಐ ಕ್ರಮ
ನಗದು ಕೊರತೆ ನಿವಾರಿಸಲು ಪಾಯಿಂಟ್‌ ಆಫ್ ಸೇಲ್ಸ್‌ ಮಷಿನ್‌ ಗಳ ಮೂಲಕ ಸಣ್ಣ ಪಟ್ಟಣಗಳಲ್ಲಿ ಪ್ರತಿ ದಿನ 2 ಸಾವಿರ ರೂ. ವರೆಗೆ ವಿಥ್‌ಡ್ರಾ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅದಕ್ಕೆ ಯಾವುದೇ ರೀತಿಯಲ್ಲಿ ಶುಲ್ಕ ವಿಧಿಸಲಾಗುತ್ತಿಲ್ಲ ಎಂದು SBI ಟ್ವೀಟ್‌ ಮೂಲಕ ಮಾಹಿತಿ ನೀಡಿದೆ. SBI ಮತ್ತು ಇತರ ಯಾವುದೇ ಬ್ಯಾಂಕ್‌ನ ಡೆಬಿಟ್‌ ಕಾರ್ಡ್‌ ಮೂಲಕ ಮೂರನೇ ಹಂತದ ನಗರ ಪ್ರದೇಶಗಳಲ್ಲಿ 1 ಸಾವಿರ ರೂ. ವರೆಗೆ ವಿಥ್‌ ಡ್ರಾ ಮಾಡಲು ಅವಕಾಶವಿದೆ. 1 ಮತ್ತು 2ನೇ ಹಂತದ ನಗರಗಳಲ್ಲಿ ಶುಲ್ಕ ರಹಿತವಾಗಿ 1 ಸಾವಿರ ರೂ. ವಿಥ್‌ಡ್ರಾಕ್ಕೆ ಅವಕಾಶವಿದೆ ಎಂದು SBIನ ಮುಖ್ಯ ನಿರ್ವಹಣಾ ಅಧಿಕಾರಿ ನೀರಜ್‌ ವ್ಯಾಸ್‌ ತಿಳಿಸಿದ್ದಾರೆ. 

ಇಂದು ಮುಕ್ತಾಯ: ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಉಂಟಾಗಿರುವ ನಗದು ಕೊರತೆ ಶುಕ್ರವಾರದ ಒಳಗಾಗಿ ಕೊನೆಗೊಳ್ಳಲಿದೆ ಎಂದು ಎಸ್‌ಬಿಐ ಅಧ್ಯಕ್ಷ ರಜನೀಶ್‌ ಕುಮಾರ್‌ ಹೇಳಿದ್ದಾರೆ. ನಗದು ಕೊರತೆ ಇರುವ ಪ್ರದೇಶಗಳಿಗೆ ಈಗಾಗಲೇ ಪೂರೈಕೆ ಮಾಡಲಾಗುತ್ತಿದೆ. ದೇಶದಲ್ಲಿ ಹಣ ಎನ್ನುವುದು ಚಾಲನೆಯಲ್ಲಿರಬೇಕು. ಜನರು ತಮ್ಮ ಬಳಿಯಲ್ಲಿಯೇ ಅದನ್ನು ಇರಿಸಿಕೊಂಡಿದ್ದರೆ ಬ್ಯಾಂಕ್‌ ಗಳಿಗೂ ವಹಿವಾಟು ಕಷ್ಟವಾಗುತ್ತದೆ ಎಂದು ರಜನೀಶ್‌ ಕುಮಾರ್‌ ಹೇಳಿದ್ದಾರೆ.

ಮುಷ್ಕರದ ಎಚ್ಚರಿಕೆ: ಎಟಿಎಂಗಳಲ್ಲಿ ನಗದು ಪೂರೈಕೆಗೆ ಕೊರತೆ ಉಂಟಾಗಿರುವುದರಿಂದ ಸಾರ್ವಜನಿಕರು ಬ್ಯಾಂಕ್‌ ಅಧಿಕಾರಿಗಳ, ಉದ್ಯೋಗಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪರಿಸ್ಥಿತಿ ತಿಳಿಗೊಳಿಸದಿದ್ದರೆ ಮುಷ್ಕರ ನಡೆಸಬೇಕಾಗುತ್ತದೆ ಎಂದು ಅಖೀಲ ಭಾರತ ಬ್ಯಾಂಕ್‌ ಉದ್ಯೋಗಿಗಳ ಸಂಘದ (ಎಐಬಿಇಎ) ಪ್ರಧಾನ ಕಾರ್ಯದರ್ಶಿ ಸಿ.ಎಚ್‌.ವೆಂಕಟಾಚಲಂ ಗುರುವಾರ ಎಚ್ಚರಿಕೆ ನೀಡಿದ್ದಾರೆ. ನೋಟು ಅಮಾನ್ಯಗೊಂಡು 16 ತಿಂಗಳು ಕಳೆದರೂ ಎಟಿಎಂಗಳನ್ನು ಮೇಲ್ದರ್ಜೆಗೆ ಏರಿಸುವ ಕಾರ್ಯ ಇನ್ನೂ ಪೂರ್ತಿಗೊಂಡಿಲ್ಲ. RBI ಸಮರ್ಥವಾಗಿ ಪರಿಸ್ಥಿತಿ ನಿಭಾಯಿಸದ್ದೇ ಕೊರತೆಗೆ ಕಾರಣ ಎಂದು ಟೀಕಿಸಿದರು.

6.08 ಲಕ್ಷ : SBI ಹೊಂದಿರುವ POS
4.78 ಲಕ್ಷ : ಹಣ ವಿಥ್‌ಡ್ರಾ ಮಾಡುವ ವ್ಯವಸ್ಥೆ ಇರುವ POS

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.