ಉಗ್ರರಿಗೆ ಹಣಕಾಸು ನೆರವು; ಜಮ್ಮು ಕಾಶ್ಮೀರದ 12 ಸ್ಥಳಗಳಲ್ಲಿ NIA ದಾಳಿ
Team Udayavani, Aug 16, 2017, 12:56 PM IST
ಶ್ರೀನಗರ್:ಕಣಿವೆ ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡುತ್ತಿರುವ ಕುರಿತು ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಬುಧವಾರ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಜಮ್ಮು ಕಾಶ್ಮೀರದ 12 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.
ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡಿರುವ ಪ್ರಕರಣದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಎನ್ ಐಎ ಮೂಲಗಳು ತಿಳಿಸಿವೆ.