ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಯೋಧ ಹುತಾತ್ಮ
Team Udayavani, Sep 8, 2019, 9:46 AM IST
ಶ್ರೀನಗರ: ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ, ಶೋಧಕಾರ್ಯದಲ್ಲಿ ನಿರತನಾಗಿದ್ದ ಯೋಧನೋರ್ವ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಗಂದೇರ್ ಬಲ್ ಜಿಲ್ಲೆಯಲ್ಲಿ ನಡೆದಿದೆ.
ಕಳೆದೆರಡು ದಿನಗಳಿಂದ ಗಂದೇರ್ ಬಲ್ನ ಪುಸಾನ್ ಪ್ರದೇದಲ್ಲಿ ಉಗ್ರ ಚಟುವಟಿಕೆಗಳು ಕಂಡುಬಂದ ಹಿನ್ನಲೆಯಲ್ಲಿ ಯೋಧರು ಶೋಧಕಾರ್ಯದಲ್ಲಿ ತೊಡಗಿದ್ದರು.
ಮೃತ ಯೋಧನನ್ನು ದಫೇದಾರ್ ಅಸ್ಲಾಂ ಖಾನ್ ಎಂದು ಗುರುತಿಸಲಾಗಿದ್ದು ನದಿ ದಡದಲ್ಲಿ ಕಾರ್ಯಾಚರಣೆಯಲ್ಲಿ ಮಗ್ನರಾಗಿದ್ದಾಗ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ರಕ್ಷಣಾ ಕಾರ್ಯ ನಡೆಸಿತ್ತಾದರೂ ನೀರಿನ ಹರಿವಿನ ವೇಗ ಹೆಚ್ಚಾದ್ದರಿಂದ ಕ್ಷಣ ಮಾತ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.
ಸತತ ಕಾರ್ಯಚರಣೆಯ ನಂತರ ಪತ್ತೆಹಚ್ಚಲಾಯಿತಾದರೂ ಅಷ್ಠರ ವೇಳೆಗಾಗಲೆ ಮೃತರಾಗಿದ್ದರು. ಶ್ರೀನಗರದ ಚಿನಾರ್ ಕಾರ್ಪೋರೇಶನ್ ಹೆಡ್ ಕ್ವಾಟರ್ಸ್ ನಲ್ಲಿ ಮೃತ ಯೋಧನ ಪಾರ್ಥಿವ ಶರೀರಕ್ಕೆ ಸೇನೆ ಅಂತಿಮ ಗೌರವ ಸಲ್ಲಿಕೆ ಮಾಡಿದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!