ಜಮ್ಮು-ಕಾಶ್ಮೀರ; ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರ ದಾಳಿ, ಇಬ್ಬರಿಗೆ ಗಂಭೀರ ಗಾಯ
ದಾಳಿಯಲ್ಲಿ ಓರ್ವ ನಾಗರಿಕ ಕೂಡಾ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ.
Team Udayavani, Jul 1, 2020, 9:00 AM IST
ನವದೆಹಲಿ: ಜಮ್ಮು-ಕಾಶ್ಮೀರದ ಸೋಪೋರಾ ಪ್ರದೇಶದಲ್ಲಿ ಕರ್ತವ್ಯ ನಿರತ ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರು ದಾಳಿ ನಡೆಸಿರುವ ಘಟನೆ ಬುಧವಾರ ನಡೆದಿದ್ದು, ನಾಲ್ವರು ಯೋಧರು ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ.
ವರದಿಯ ಪ್ರಕಾರ, ಸಿಆರ್ ಪಿಎಫ್ ಪಡೆ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರಿಂದ ನಾಲ್ವರು ಗಾಯಗೊಂಡಿದ್ದು, ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಅಲ್ಲದೇ ದಾಳಿಯಲ್ಲಿ ಓರ್ವ ನಾಗರಿಕ ಕೂಡಾ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ.
ಘಟನಾ ಸ್ಥಳವನ್ನು ಸುತ್ತುವರಿದಿದ್ದು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಜಮ್ಮು ಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ. ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಕಳೆದ ಒಂದು ತಿಂಗಳಲ್ಲಿ 25ಕ್ಕೂ ಅಧಿಕ ಉಗ್ರರು ಎನ್ ಕೌಂಟರ್ ಗೆ ಬಲಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ