ಉಗ್ರರಿಂದ ಅಣು ಸಮರ ಸಾಧ್ಯತೆ: ಜನರಲ್ ರಾವತ್ ಎಚ್ಚರಿಕೆ
Team Udayavani, Jan 17, 2018, 11:11 AM IST
ಹೊಸದಿಲ್ಲಿ : ಭಾರತದ ಗಡಿ ನುಸುಳಿ ಬರುವ ಉಗ್ರರ ಬಳಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿದ್ದು ಭವಿಷ್ಯದಲ್ಲಿ ಅಣ್ವಸ್ತ್ರಗಳು ಕೂಡ ಅವರ ಕೈವಶವಾಗುವ ಸಾಧ್ಯತೆ ಇರುವುದರಿಂದ ದೇಶಕ್ಕೆ ಉಗ್ರರಿಂದ ಅಣು ಸಮರದ ಬೆದರಿಕೆ ಇದೆ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಎಚ್ಚರಿಸಿದ್ದಾರೆ.
ದಿಲ್ಲಿಯಲ್ಲಿ ನಡೆದ 2018 ರೈಸಿನಾ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು ಉಗ್ರರಿಗೆ ಅಣ್ವಸ್ತ್ರಗಳು ಸುಲಭದಲ್ಲಿ ಕೈವಶವಾಗುವ ಅಪಾಯ ಇರುವುದರಿಂದ ಮನುಕುಲ ನಾಶಕ್ಕೆ ಇದು ಕಾರಣವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಅಣ್ವಸ್ತ್ರಗಳು ಮತ್ತು ರಾಸಾಯನಿಕ ಅಸ್ತ್ರಗಳು ಉಗ್ರರ ಕೈ ಸೇರುವ ಬೆದರಿಕೆ ಇರುವುದರಿಂದ ಇಡಿಯ ಮನುಕುಲವೇ ನಾಶಗೊಳ್ಳುವ ಅಪಾಯವಿದೆ ಎಂದು ಜನರಲ್ ರಾವತ್ ಹೇಳಿದರು.
ಪಾಕಿಸ್ಥಾನದ ವಿರುದ್ಧ ಪರೋಕ್ಷ ದಾಳಿ ಮಾಡಿದ ಜನರಲ್ ರಾವತ್, ಉಗ್ರ ಸಂಘಟನೆಯನ್ನು ಪ್ರವರ್ತಿಸುವ ದೇಶಗಳನ್ನು ಪ್ರತ್ಯೇಕಗೊಳಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು.
ಅತ್ಯಂತ ಸಕ್ರಿಯವಾಗಿರುವ ಉಗ್ರ ಇಂಟರ್ನೆಟ್ ಜಾಲವನ್ನು ಹತ್ತಿಕ್ಕುವ ನಿಟಿಟನಲ್ಲಿ ಸಾಮಾಜಿಕ ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವ ಅಗತ್ಯವಿದೆ ಎಂದು ಸಾವತ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?