ಹುದ್ದೆ ದುರುಪಯೋಗ ಆರೋಪ ಸತ್ಯಕ್ಕೆ ದೂರ

ದೆಹಲಿ ಹೈಕೋರ್ಟಲ್ಲಿ ಚಿದು ವಾದ

Team Udayavani, Sep 24, 2019, 5:05 AM IST

ನವದೆಹಲಿ: ವಿತ್ತ ಸಚಿವರಾಗಿದ್ದಾಗ ವೈಯಕ್ತಿಕ ಲಾಭಕ್ಕಾಗಿ ಹುದ್ದೆಯ ದುರುಪಯೋಗ ಮಾಡಿಲ್ಲ. ಈ ಬಗ್ಗೆ ಕೇಂದ್ರ ತನಿಖಾ ಸಂಸ್ಥೆ ಸಿಬಿಐ ಮಾಡುತ್ತಿರುವ ಆರೋಪ ನಿರಾಧಾರ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಪಿ.ಚಿದಂಬರಂ ದೆಹಲಿ ಹೈಕೋರ್ಟ್‌ಗೆ ಸೋಮವಾರ ಅರಿಕೆ ಮಾಡಿಕೊಂಡಿದ್ದಾರೆ. ಜಾಮೀನು ಕೋರಿ ಸಲ್ಲಿಕೆ ಮಾಡಿರುವ ಅರ್ಜಿಗೆ ಕೇಂದ್ರ ತನಿಖಾ ಸಂಸ್ಥೆ ನೀಡಿರುವ ಉತ್ತರಕ್ಕೆ ನ್ಯಾಯಾಲಯದಲ್ಲಿ ಸಲ್ಲಿಕೆ ಮಾಡಿರುವ ಪ್ರತಿಕ್ರಿಯೆಯಲ್ಲಿ ಈ ಅಂಶ ಪ್ರಸ್ತಾಪ ಮಾಡಿದ್ದಾರೆ.

ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪ ಅಸಬಂದ್ಧವಾದದ್ದು ಎಂದು ಚಿದು ಹೇಳಿಕೊಂಡಿದ್ದಾರೆ. ಐಎನ್‌ಎಕ್ಸ್‌ ಮಾಧ್ಯಮ ಸಂಸ್ಥೆಗೆ ವಿದೇಶಿ ನೇರ ಬಂಡವಾಳ ಹೂಡಿಕೆ ಮೂಲಕ ಬಂದ 305 ಕೋಟಿ ರೂ.ಗಳ ಪೈಕಿ ಅನುಮೋದನೆ ನೀಡಲಾಗಿರುವ ಶೇ.46.216 ಪ್ರಮಾಣ ಸಚಿವರಾಗಿದ್ದಾಗಿನ ಮಿತಿಯಲ್ಲಿಯೇ ಇತ್ತು ಎಂದು ಕೋರ್ಟಲ್ಲಿ ಪ್ರತಿಪಾದಿಸಿದ್ದಾರೆ.

ವೈಯಕ್ತಿಕ ಲಾಭಕ್ಕಾಗಿ ವಿತ್ತ ಸಚಿವ ಸ್ಥಾನದ ಹುದ್ದೆಯನ್ನು ದುರುಪಯೋಗ ಪಡಿಸಿಕೊಂಡಿದ್ದೇನೆ ಎಂಬ ಸಿಬಿಐ ಆರೋ ಪವನ್ನು ಚಿದು ತಿರಸ್ಕರಿಸಿದ್ದಾರೆ. ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುವಂತೆ ನಡೆದು ಕೊಂಡಿಲ್ಲವೆಂದು ಹೇಳಿಕೊಂಡಿದ್ದಾರೆ. ಐಎನ್‌ಎಕ್ಸ್‌ ಮಾಲೀಕರಾಗಿದ್ದ ಇಂದ್ರಾಣಿ ಮುಖರ್ಜಿ ಮತ್ತು ಪೀಟರ್‌ ಮುಖರ್ಜಿ ತಮ್ಮ ವಿರುದ್ಧ ನೀಡಿದ ಹೇಳಿಕೆಗಳಲ್ಲಿ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ