ದಾಳಿ ವಿಫ‌ಲ: ಐಎಸ್‌ಐನಿಂದ  ಇಬ್ಬರು ಭಾರತೀಯರ ಹತ್ಯೆ

Team Udayavani, Jan 23, 2017, 10:08 AM IST

T.jpg

ಹೊಸದಿಲ್ಲಿ: ಭಾರತದಲ್ಲಿ ರೈಲ್ವೇ ಜಾಲವನ್ನು ಗುರಿಯಾಗಿರಿಸಿಕೊಂಡು ನಡೆಸಲು ಉದ್ದೇಶಿಸಿರುವ ದಾಳಿ ವಿಫ‌ಲವಾಗಿರುವುದಕ್ಕೆ ಪಾಕಿಸ್ಥಾನದ ಗುಪ್ತಚರ ಸಂಸ್ಥೆ ಐಎಸ್‌ಐ ಇಬ್ಬರು ಭಾರತೀಯರನ್ನು ಕೊಂದಿದೆ. ಹೀಗೆಂದು ಮೂಲಗಳನ್ನು ಉಲ್ಲೇಖೀಸಿ “ಇಂಡಿಯಾ ಟುಡೇ’ ವರದಿ ಮಾಡಿದೆ. ಕೆಲ ದಿನಗಳ ಹಿಂದಷ್ಟೇ ಬಿಹಾರ ಪೊಲೀಸರು ಉತ್ತರ ಪ್ರದೇಶದ ಕಾನ್ಪುರದಲ್ಲಿ ಕೆಲ ಸಮಯದ ಹಿಂದೆ ಸಂಭವಿಸಿದ್ದ ರೈಲು ಅಪಘಾತಕ್ಕೆ ಐಎಸ್‌ಐ ನೆರವು ನೀಡಿರುವ ಸಾಧ್ಯತೆ ಇದೆ ಎಂದು ಹೇಳಿದ್ದರು. ಅದಕ್ಕೆ ಪೂರಕವಾಗಿ ನಾಲ್ವರನ್ನು ಬಂಧಿಸಿದ್ದರು ಕೂಡ. ಇಬ್ಬರು ಭಾರತೀಯರನ್ನು ಕೊಲ್ಲಿಸಿದ್ದಕ್ಕೆ ಆಡಿಯೋ ಟೇಪ್‌ ಕೂಡ ಇದೆ ಎಂದು ಚಾನೆಲ್‌ ವರದಿಯಲ್ಲಿ ಹೇಳಿದೆ. 

ಬೃಜ್‌ಕಿಶೋರ್‌ ಗಿರಿ ಎಂಬ ವ್ಯಕ್ತಿ ಅರುಣ್‌ ಮತ್ತು ದೀಪಕ್‌ ರಾಮ್‌ ಎಂಬ ಇಬ್ಬರನ್ನು ದೇಶದಲ್ಲಿರುವ ರೈಲ್ವೇ ಜಾಲದ ಮೇಲೆ ದಾಳಿ ನಡೆಸಲು ನಿಯೋಜನೆ ಮಾಡಿದ್ದ. ಆದರೆ ಅದನ್ನು ಅನುಷ್ಠಾನಗೊಳಿಸುವಲ್ಲಿ ಅವರಿಬ್ಬರು ವಿಫ‌ಲರಾಗಿದ್ದರು. ಹೀಗಾಗಿ ಅವರಿಬ್ಬರನ್ನು ನೇಪಾಲದಲ್ಲಿ ಗಿರಿ ಎಂಬಾತ ಕೊಂದಿದ್ದಾನೆ ಎಂದು ಹೇಳಲಾಗಿದೆ. ಇಂಥ ಕೃತ್ಯ ಎಸಗುವಂತೆ ಐಎಸ್‌ಐನ ಹ್ಯಾಂಡ್ಲರ್‌ ಶಮ್‌ಶೂಲ್‌ ಹೂಡಾ ಎಂಬಾತ ಸೂಚನೆ ನೀಡಿದ್ದ. ರೈಲ್ವೇ ಹಳಿಗಳಲ್ಲಿ ಸ್ಫೋಟ ನಡೆಸಲು ದೀಪಕ್‌ ಮತ್ತು ಅರುಣ್‌ ಸ್ಫೋಟಕಗಳನ್ನು ಇರಿಸಿದ್ದನ್ನು ಪೊಲೀಸರು ಪತ್ತೆ ಹಚ್ಚಿದ್ದರಿಂದ ಸಂಭಾವ್ಯ ದುರಂತ ತಪ್ಪಿಹೋಗಿತ್ತು. ಇದರಿಂದಾಗಿ ಕ್ರುದ್ಧಗೊಂಡ ಗಿರಿ ಅವರಿಬ್ಬರನ್ನು ಹತ್ಯೆ ಮಾಡಿದ. ಅದರ ದಾಖಲೆಗಾಗಿ ಆಡಿಯೋವನ್ನು ಧ್ವನಿ ಮುದ್ರಿಸಿ ಶಮ್‌ಶೂಲ್‌ ಹೂಡಾಗೆ ಕಳುಹಿಸಿಕೊಟ್ಟಿದ್ದ.

ಹಾನಿಗೆ ಸಂಚು: ಈಗಾಗಲೇ ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಪಾಕ್‌ನ ಐಎಸ್‌ಐ ದೇಶದ ರೈಲ್ವೇ ಜಾಲಕ್ಕೆ ನಷ್ಟ ಉಂಟು ಮಾಡಲು ಮುಂದಾಗಿದೆ. ಅದನ್ನು ಕೇಂದ್ರ ಗುಪ್ತಚರ ಸಂಸ್ಥೆಗಳೂ ಪುಷ್ಟೀಕರಿಸಿವೆ. ಅದರ ಮೂಲಕ ಸಾಕಷ್ಟು ಸಂಖ್ಯೆಯಲ್ಲಿ ಜೀವ ಹಾನಿ ಮಾಡುವ ದುರುದ್ದೇಶವೂ ಕೂಡ ಆ ಸಂಸ್ಥೆಗೆ ಇತ್ತು. ಅದಕ್ಕೆ ಪೂರಕವಾಗಿ ಕಾನ್ಪುರ ರೈಲು ದುರಂತಕ್ಕೆ ಪಾಕ್‌ನ ಗುಪ್ತಚರ ಸಂಸ್ಥೆಯೇ ಕಾರಣ ಎಂಬ ವಾದವನ್ನೂ ಕೇಂದ್ರ ಗುಪ್ತಚರ ಸಂಸ್ಥೆಗಳು ಹೇಳಿಕೊಳ್ಳುತ್ತಿವೆ.
ತನಿಖೆ ವೇಳೆ ಗೊತ್ತಾಯಿತು: ದೀಪಕ್‌ ಮತ್ತು ಅರುಣ್‌ ಎಂಬುವರ ಹತ್ಯೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರಬೇಕಾದರೆ ಕಾನ್ಪುರ ರೈಲು ದುರಂತಕ್ಕೂ ಐಎಸ್‌ಐಗೂ ಸಂಬಂಧವಿದೆ ಎಂಬ ಅಂಶ ಗೊತ್ತಾಯಿತು. ಅದಕ್ಕೆ ಪೂರಕವಾಗಿ ಬಿಹಾರದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಭಾರತ ಮತ್ತು ನೇಪಾಳ ಗಡಿ ಸಮೀಪ ಇರುವ ಘೋರ್‌ಸಹಾನ್‌ ಎಂಬಲ್ಲಿ ಹಳಿಯಲ್ಲಿ ಸ್ಫೋಟಕಗಳನ್ನು ಇರಿಸಲು ಹತ್ಯೆಗೀಡಾದ ದೀಪಕ್‌, ಅರುಣ್‌ ಮುಂದಾಗಿದ್ದರು. ಬಿಹಾರ ಪೊಲೀಸರು ಅದನ್ನು ಪತ್ತೆ ಹಚ್ಚಿ ನಿಷ್ಕ್ರಿಯಗೊಳಿಸಿದ್ದರು. ಹೀಗಾಗಿ, ಅವರಿಬ್ಬರನ್ನು ನೇಪಾಳಕ್ಕೆ ಕರೆದೊಯ್ದು ಅಲ್ಲಿನ ಅರಣ್ಯ ಪ್ರದೇಶದಲ್ಲಿ ಹತ್ಯೆ ಮಾಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖೀಸಿ ಚಾನೆಲ್‌ ವರದಿ ಮಾಡಿದೆ.

ಟಾಪ್ ನ್ಯೂಸ್

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.