ದಕ್ಷಿಣ ಭಾರತದಲ್ಲಿ ಪ್ರಾಂತೀಯ ಪಕ್ಷಗಳ ಜತೆಗಿನ ಮೈತ್ರಿಗೆ ಬಿಜೆಪಿ ಒಲವು
Team Udayavani, Sep 4, 2018, 6:00 AM IST
ಹೊಸದಿಲ್ಲಿ: 2019ರ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಅಧಿಕಾರಕ್ಕೇರಲು ಅಗತ್ಯವಾದರೆ ದಕ್ಷಿಣ ಭಾರತದ ಪಕ್ಷಗಳ ಬೆಂಬಲ ಪಡೆಯುವ ಅವಕಾಶಗಳಿಗೆ ಬಿಜೆಪಿ ಎದುರು ನೋಡುತ್ತಿದೆ. ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಪ್ರಾದೇಶಿಕ ಪಕ್ಷಗಳ ಬೆಂಬಲ ಪಡೆಯಬಹುದಾಗಿದೆ. ಹೀಗಾಗಿ ಕರ್ನಾಟಕ ಹೊರತುಪಡಿಸಿ ದಕ್ಷಿಣದ ಉಳಿದ ರಾಜ್ಯಗಳಲ್ಲಿ ಇತರ ಪಕ್ಷಗಳ ಜೊತೆಗೆ ಸಮಾನ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದಂತಿದೆ. ತಮಿಳುನಾಡಿನಲ್ಲಿ ಡಿಎಂಕೆ ವಿರುದ್ಧ ತೀವ್ರ ವಾಗ್ಧಾಳಿಯನ್ನು ಬಿಜೆಪಿ ನಡೆಸುತ್ತಿಲ್ಲ. ಅಷ್ಟೇ ಅಲ್ಲ, ಎಐಎಡಿಎಂಕೆ ಜೊತೆಗೆ ಬಿಜೆಪಿ ಉತ್ತಮ ಸಂಬಂಧ ಕಾಯ್ದುಕೊಂಡಿದೆ. ಇನ್ನು ತೆಲಂಗಾಣದಲ್ಲಿ ಎನ್ಡಿಎ ಜೊತೆಗೆ ಟಿಆರ್ಎಸ್ ಕೈಜೋಡಿಸುವ ಸಾಧ್ಯತೆಯಿದೆ. ಆಂಧ್ರಪ್ರದೇಶದಲ್ಲಿ ಒಕ್ಕೂಟದಿಂದ ಟಿಡಿಪಿ ಹೊರನಡೆದರೂ, ವೈಎಸ್ಆರ್ ಕಾಂಗ್ರೆಸ್ ಜೊತೆಗೆ ಸ್ನೇಹಿ ಸಾಧಿಸಲು ಬಿಜೆಪಿಗೆ ಸಾಧ್ಯವಾಗಿದೆ.
ದಕ್ಷಿಣ ಭಾರತದಲ್ಲಿ ಸದ್ಯ ಕರ್ನಾಟಕದಲ್ಲಿ 15, ಆಂಧ್ರದಲ್ಲಿ 2, ತೆಲಂಗಾಣ ಹಾಗೂ ತಮಿಳುನಾಡಿನಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದೆ. ಕೇರಳದಲ್ಲಿ ಒಂದೂ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ