ಐಟಿ ರಿಟರ್ನ್ಸ್ ಸಲ್ಲಿಕೆ ಮಾಡದಿದ್ದರೆ ಕಪ್ಪು ಪಟ್ಟಿಗೆ
Team Udayavani, Jul 31, 2018, 6:00 AM IST
ಹೊಸದಿಲ್ಲಿ: ಐಟಿ ರಿಟರ್ನ್ಸ್ ಸಲ್ಲಿಕೆ ಮಾಡದೇ ಇರುವವರನ್ನು ಕಪ್ಪುಪಟ್ಟಿಗೆ ಸೇರ್ಪಡೆಗೊಳಿಸುವ ಕಾನೂನು ಜಾರಿಗೆ ಕೇಂದ್ರ ಮುಂದಾಗಿದೆ. ಹೀಗಾದರೆ ಅಂಥವರಿಗೆ ಯಾವುದೇ ರೀತಿಯಲ್ಲಿ ಸಾಲಕ್ಕೆ ಅರ್ಜಿ ಹಾಕಲು ಅರ್ಹತೆ ಇರುವುದಿಲ್ಲ. ಜತೆಗೆ ಟೆಂಡರ್ನಲ್ಲಿ ಭಾಗವಹಿಸಲೂ ಅವಕಾಶ ಇರುವುದಿಲ್ಲ. ಸರಕಾರದ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಮತ್ತು ಅಸಂಘಟಿತ ವಲಯದಲ್ಲಿನ ಉದ್ಯೋಗದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತದೆ.
ಈಗಾಗಲೇ ರಿಟರ್ನ್ಸ್ ಸಲ್ಲಿಕೆ ಅವಧಿಯನ್ನು ಆ.31ಕ್ಕೆ ವಿಸ್ತರಿಸಲಾಗಿದೆ. ಜತೆಗೆ ಡಿಸೆಂಬರ್ ಅಂತ್ಯದಲ್ಲಿ ರಿಟರ್ನ್ಸ್ ಸಲ್ಲಿಕೆ ಮಾಡಿದರೆ 5 ಸಾವಿರ ರೂ., ಮುಂದಿನ ಮಾರ್ಚ್ನಲ್ಲಿ ಸಲ್ಲಿಸಿದರೆ 10 ಸಾವಿರ ರೂ. ದಂಡ ವಿಧಿಸಲೂ ತೀರ್ಮಾನಿಸಲಾಗಿದೆ.
ಸಲ್ಲಿಕೆ ಸಂಖ್ಯೆ ಹೆಚ್ಚಳ: ಮತ್ತೂಂದು ಕುತೂಹಲಕಾರಿ ಅಂಶವೆಂದರೆ ರಿಟರ್ನ್ಸ್ ಸಲ್ಲಿಕೆ ಮತ್ತು ರಿಫಂಡ್ ಪ್ರಮಾಣ ಶೇ.80ರಷ್ಟು ಹೆಚ್ಚಾಗಿದೆ. ಕಳೆದ ವಾರದ ವರೆಗಿನ ದಾಖಲೆಗಳ ಪ್ರಕಾರ ರಿಟರ್ನ್ಸ್ ಫೈಲ್ ಮಾಡಿರುವವರ ಸಂಖ್ಯೆ 3 ಕೋಟಿ ದಾಟಿದೆ. ಕಳೆದ ಗುರುವಾರದ ವರೆಗೆ 77,700 ಕೋಟಿ ರೂ. ಮೌಲ್ಯದಷ್ಟು ಮೊತ್ತ ರಿಫಂಡ್ ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಅದು ಶೇ.35ರಷ್ಟು ಹೆಚ್ಚಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…