121 ಕೋಟಿ ರೂ.ದಂಡ ಸಂಗ್ರಹಿಸಿದ ಕೇಂದ್ರ ರೈಲ್ವೇ
Team Udayavani, Jan 16, 2018, 6:10 AM IST
ಮುಂಬಯಿ: ಕೇಂದ್ರೀಯ ರೈಲ್ವೇಯು ಟಿಕೆಟ್ ರಹಿತ ಪ್ರಯಾಣಿಕರಿಂದ ಬರೋಬ್ಬರಿ121.09 ಕೋಟಿ ರೂ. ಸಂಗ್ರಹಿಸಿ ದಾಖಲೆ ಬರೆದಿದೆ. 2017ರ ಏಪ್ರಿಲ್ನಿಂದ ಡಿಸೆಂಬರ್ ವರೆಗೆ ಟಿಕೆಟ್ ರಹಿತ ಪ್ರಯಾಣ, ಪಾವತಿ ರಹಿತ ಸಾಮಾನು ಸರಂಜಾಮುಗಳ ಸಾಗಾಟ ಮತ್ತು ಇತರ ಅಶಿಸ್ತುಗಳಿಗಾಗಿ ಪ್ರಯಾಣಿಕರಿಗೆ ದಂಡ ವಿಧಿಸಿ ಇಷ್ಟು ಹಣ ಸಂಗ್ರಹಿಸಲಾಗಿದೆ ಎಂದು ರೈಲ್ವೇ ಇಲಾಖೆ ಮಾಹಿತಿ ನೀಡಿದೆ.
2016ರ ಇದೇ ಅವಧಿಯಲ್ಲಿ ದಂಡ ವಸೂಲಿಯಿಂದ 100.53 ಕೋಟಿ ಸಂಗ್ರಹಿಸಲಾಗಿತ್ತು. ಕಳೆದ ಅವಧಿಗೆ ಹೋಲಿಸಿದರೆ ದಂಡ ಸಂಗ್ರಹದಲ್ಲಿ ಶೇ.20.46ರಷ್ಟು ಹೆಚ್ಚಳವಾಗಿದೆ. ಡಿಸೆಂಬರ್ ತಿಂಗಳೊಂದರಲ್ಲೇ 2.06 ಲಕ್ಷ ರೂ. ಸಂಗ್ರಹವಾಗಿದೆ.
ಇದೇ ತಿಂಗಳು ಕಾಯ್ದಿರಿಸಿದ ಟಿಕೆಟ್ಗಳನ್ನು ಬದಲಾಯಿಸಿರುವ 439 ಕೇಸುಗಳು ಪತ್ತೆಯಾಗಿದ್ದು, ಅಂಥವರಿಂದ 3.56 ಲಕ್ಷ ರೂ.ಗಳನ್ನು ದಂಡದ ರೂಪದಲ್ಲಿ ಪಡೆಯಲಾಗಿದೆ. ಟಿಕೆಟ್ರಹಿತ ಪ್ರಯಾಣ ವನ್ನು ನಿಯಂತ್ರಿಸುವುದೇ ಉದ್ದೇಶ ಎಂದಿದ್ದಾರೆ ಅಧಿಕಾರಿಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ