ಡಿವೈಎಸ್ಪಿ ಗಣಪತಿ ಸಾವು ಅರ್ಜಿ ವಿಚಾರಣೆ ಮುಂದಕ್ಕೆ
Team Udayavani, Feb 21, 2017, 3:45 AM IST
ಉದಯವಾಣಿ ದೆಹಲಿ ಪ್ರತಿನಿಧಿ: ರಾಜ್ಯಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಅವರ ತಂದೆ ಎಂ.ಕೆ.ಕುಶಾಲಪ್ಪಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಎರಡು ವಾರ ಮುಂದೂಡಿದೆ.
ಪ್ರಕರಣದಲ್ಲಿನ ದೂರುದಾರರಾದ ಕುಶಾಲಪ್ಪಪರ ವಕೀಲರು ವಾದ ಮಂಡನೆಗೆ ಸಮಯ ಕೋರಿದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎ. ಕೆ. ಗೊಯೆಲ್ ಮತ್ತು ನ್ಯಾ|ಯು.ಲಲಿತ್ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ಮುಂದೂಡಿತು. ಈ ಹಿಂದಿನ ವಿಚಾರಣೆಯಲ್ಲಿ ರಾಜ್ಯಕ್ಕೆ ನೋಟಿಸ್ ನೀಡಿದ್ದ ಸುಪ್ರೀಂ ಕೋರ್ಟ್ ಎರಡು ವಾರದೊಳಗೆ ನೋಟಿಸ್ಗೆ ಪ್ರತಿಕ್ರಿಯಿಸುವಂತೆ ಹೇಳಿದೆ.
ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಎ.ಎಂ.ಪ್ರಸಾದ್, ಪ್ರಣವ್ ಮೊಹಂತಿ ಮುಂತಾದವರ ಹೆಸರು ಉಲ್ಲೇಖಗೊಂಡಿದ್ದು ಸಿಐಡಿಯಿಂದ ಮುಕ್ತ ತನಿಖೆ ಸಾಧ್ಯವಿಲ್ಲ. ಆದ್ದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಮೃತ ಗಣಪತಿ ತಂದೆ ಕುಶಾಲಪ್ಪ ಅವರ ಬೇಡಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ