ಸಿಬಿಐಗೆ ಹೊಸ ಮುಖ್ಯಸ್ಥರ: ಆಯ್ಕೆಗೆ 24ಕ್ಕೆ ಸಮಿತಿ ಸಭೆ
Team Udayavani, Jan 18, 2019, 12:30 AM IST
ಹೊಸದಿಲ್ಲಿ: ಸಿಬಿಐಗೆ ನೂತನ ಮುಖ್ಯಸ್ಥರ ಆಯ್ಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತಾಧಿಕಾರದ ಸಮಿತಿ 24ರಂದು ಸಭೆ ನಡೆಸಲಿದೆ. ನಿ.ಪೂ. ಮುಖ್ಯಸ್ಥ ಅಲೋಕ್ ವರ್ಮಾ ವಜಾಗೊಂಡ ಬೆನ್ನಲ್ಲಿಯೇ ಈ ಸಭೆ ನಡೆಯಲಿದೆ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸುಪ್ರೀಂಕೋರ್ಟ್ ಮುಖ್ಯ ನ್ಯಾ| ರಂಜನ್ ಗೊಗೊಯ್ ಸದಸ್ಯರಾಗಿರುವ ಸಮಿತಿಯ ಸಭೆ ಯನ್ನು ಜ.21ಕ್ಕೆ ನಡೆಸಲು ನಿರ್ಧರಿಸಲಾಗಿತ್ತಾದರೂ, ಅಂತಿಮ ವಾಗಿ ಜ. 24ರ ದಿನ ನಿಗದಿ ಮಾಡಲಾಯಿತು. ಮುಖ್ಯ ನ್ಯಾ| ರಂಜನ್ ಗೊಗೊಯ್ ಸಭೆಯಲ್ಲಿ ಭಾಗವಹಿಸಲಿದ್ದಾರೆಯೋ ಅಥವಾ ಪ್ರತಿನಿಧಿ ಕಳುಹಿಸಲಿದ್ದಾರೆಯೋ ಎನ್ನುವುದು ತತ್ಕ್ಷಣಕ್ಕೆ ಗೊತ್ತಾ ಗಿಲ್ಲ. ಜ.10ರಂದು ನಡೆದಿದ್ದ ಸಭೆಯಿಂದ ದೂರ ಉಳಿದು, ನ್ಯಾ| ಎ.ಕೆ.ಸಿಕ್ರಿ ಅವರನ್ನು ತಮ್ಮ ಪ್ರತಿನಿಧಿಯಾಗಿ ಕಳುಹಿಸಿದ್ದರು.
ಮತ್ತೂಂದೆಡೆ ಹಿರಿಯ ಐಪಿಎಸ್ ಅಧಿಕಾರಿ ಎಂ. ನಾಗೇಶ್ವರ ರಾವ್ ಅವರನ್ನು ಸಿಬಿಐ ಮಧ್ಯಂತರ ನಿರ್ದೇಶಕರನ್ನಾಗಿ ನೇಮಿಸಿರುವ ನಿರ್ಧಾರದ ವಿರುದ್ಧ ಸರಕಾರೇತರ ಸಂಸ್ಥೆಯೊಂದು (ಎನ್ಜಿಒ) ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ತ್ವರಿತವಾಗಿ ವಿಚಾರಣೆಗೊಳಪಡಿಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಮುಂದಿನ ವಾರ ಅದರ ವಿಚಾರಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!