36 ಬ್ಯಾಂಕ್ಗಳಿಗೆ ಆರ್ಬಿಐ 71 ಕೋಟಿ ದಂಡ
Team Udayavani, Mar 10, 2019, 12:30 AM IST
ಹೊಸದಿಲ್ಲಿ: ತನ್ನ ಸೂಚನೆಯ ಹೊರತಾಗಿಯೂ, ಸ್ವಿಫ್ಟ್ ವ್ಯವಸ್ಥೆಯನ್ನು ಸೂಕ್ತವಾಗಿ ನಿರ್ವಹಿಸದ ಕಾರಣಕ್ಕೆ, ಬ್ಯಾಂಕ್ ಆಫ್ ಬರೋಡಾ, ಸಿಟಿ ಯೂನಿಯನ್ ಬ್ಯಾಂಕ್, ಎಚ್ಎಸ್ಬಿಸಿ, ಐಸಿಐಸಿಐ ಬ್ಯಾಂಕ್, ಎಸ್ಬಿಐ ಮತ್ತು ಯೆಸ್ ಬ್ಯಾಂಕ್ ಸೇರಿದಂತೆ 36 ಬ್ಯಾಂಕ್ಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ 71 ಕೋಟಿ ರೂ. ದಂಡ ವಿಧಿಸಿದೆ. ಹಣಕಾಸು ಸಂಸ್ಥೆಗಳ ಮಧ್ಯೆ ವಹಿವಾಟುಗಳಿ ಗಾಗಿ ಸ್ವಿಫ್ಟ್ ಜಾಗತಿಕ ಸಂದೇಶ ರವಾನೆ ಸಾಫ್ಟ್ವೇರ್ ಅನ್ನು ಬಳಸಲಾಗುತ್ತಿದೆ. ಇದೇ ವ್ಯವಸ್ಥೆಯನ್ನು ದುರ್ಬಳಕೆ ಮಾಡಿ ಕೊಂಡಿದ್ದ ಉದ್ಯಮಿ ನೀರವ್ ಮೋದಿ, ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ 13 ಸಾವಿರ ಕೋಟಿ ರೂ. ಮೋಸ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಆರ್ಬಿಐ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ