ಮೋದಿ ಹಿಂದಿ ಬಿಯರ್ ಗ್ರಿಲ್ಸ್ ಗೆ ಅರ್ಥ ಆಗಿದ್ದು ಹೇಗೆ?
ಮ್ಯಾನ್ ವರ್ಸಸ್ ವೈಲ್ಡ್ ಕುರಿತ ಕುತೂಹಲದ ಪ್ರಶ್ನೆಗೆ ಸಿಕ್ಕಿತು ಉತ್ತರ!
Team Udayavani, Aug 25, 2019, 4:36 PM IST
ಹೊಸದಿಲ್ಲಿ: ಡಿಸ್ಕವರಿ ಚಾನೆಲ್ ನಲ್ಲಿ ಪ್ರಸಾರವಾಗುವ ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮದಲ್ಲಿ ನಿರೂಪಕ ಬಿಯರ್ ಗ್ರಿಲ್ಸ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿರುವ ಎಪಿಸೋಡ್ನ ಪ್ರಸಾರ ಇತ್ತೀಚೆಗೆ ಆಗಿದ್ದು ಗೊತ್ತೇ ಇದೆ.
ಜಗತ್ತಿನಾದ್ಯಂತ ಲಕ್ಷಾಂತರ ಮಂದಿ ಈ ಕಾರ್ಯಕ್ರಮವನ್ನು ನೋಡಿದ್ದರು. ಅದರ ಬೆನ್ನಲ್ಲೇ ಪ್ರಶ್ನೆಯೊಂದು ಎಲ್ಲರನ್ನೂ ಕಾಡಿತ್ತು. ಪ್ರಧಾನಿ ಮೋದಿ ಅವರು ಹಿಂದಿಯಲ್ಲಿ ಮಾತನಾಡುತ್ತಿದ್ದರೆ, ಬಿಯರ್ ಅವರು ಇಂಗ್ಲಿಷ್ ನಲ್ಲಿ ಮಾತನಾಡುತ್ತಿದ್ದರು. ಮೋದಿ ಅವರ ಹಿಂದಿ ಅವರಿಗೆ ಅರ್ಥವಾಗುತ್ತಿದ್ದುದು ಹೇಗೆ ಎಂಬುದು ಎಲ್ಲರ ತಲೆಕೊರೆದಿತ್ತು.
ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಖುದ್ದು ಪ್ರಧಾನಿ ಅವರೇ ಸಂಶಯ ಪರಿಹಾರ ಮಾಡಿದ್ದಾರೆ. ಮನ್ ಕೀ ಬಾತ್ ನಲ್ಲಿ ಈ ಬಗ್ಗೆ ಮೋದಿ ಅವರು ಉತ್ತರ ನೀಡಿದ್ದು, ಬಿಯರ್ ಅವರ ಬಳಿ ಒಂದು ಪುಟ್ಟ ಸಲಕರಣೆ ಇದ್ದು ಅದನ್ನು ಕಿವಿ ಹತ್ತಿರ ಇಟ್ಟುಕೊಂಡಿದ್ದರು. ಅದು ನಾನು ಹಿಂದಿಯಲ್ಲಿ ಮಾತನಾಡುತ್ತಿದ್ದಂತೆ ತನ್ನಿಂದ ತಾನಾಗಿಯೇ ಭಾಷಾಂತರಿಸಿ ಇಂಗ್ಲಿಷ್ ನಲ್ಲಿ ಹೇಳುತ್ತಿತ್ತು. ತಂತ್ರಜ್ಞಾನದ ಈ ಸಾಧ್ಯತೆಯಿಂದಾಗಿ ಸಂವಹನ ಸುಲಭವಾಗಿ ನಡೆಯಿತು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು