ಬೆಂಗಳೂರಿಗೂ ಬಂದಿದ್ದ ಲಂಕಾ ಸ್ಫೋಟದ ಉಗ್ರರು


Team Udayavani, May 5, 2019, 6:15 AM IST

lanka

ಕೊಲಂಬೊ/ಬೆಂಗಳೂರು: ಶ್ರೀಲಂಕಾದ ಕೊಲಂಬೊದಲ್ಲಿ ಈಸ್ಟರ್‌ ರವಿವಾರ ನಡೆದ ಭಾರೀ ಸರಣಿ ಸ್ಫೋಟದ ರೂವಾರಿಗಳು ಬೆಂಗಳೂರು, ಕೇರಳ ಮತ್ತು ಕಾಶ್ಮೀರಕ್ಕೂ ಭೇಟಿ ನೀಡಿದ್ದರು ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.

ಸ್ವತಃ ಶ್ರೀಲಂಕಾದ ಸೇನಾ ಮುಖ್ಯಸ್ಥ ಲೆ|ಜ| ಮಹೇಶ್‌ ಸೇನಾನಾಯಕೆ, ಬಿಬಿಸಿ ವಾಹಿನಿಗೆ ನೀಡಿದ ಸಂದ ರ್ಶನದಲ್ಲಿ ಈ ಮಾಹಿತಿ ಹೊರಹಾಕಿದ್ದಾರೆ. ಲಂಕಾ
ದಲ್ಲಿ ಸ್ಫೋಟ ನಡೆಸುವ ಮುನ್ನ ಈ ಪಾತಕಿಗಳು ಭಾರತದ ಕೇರಳ, ಕಾಶ್ಮೀರ ಮತ್ತು ಬೆಂಗ ಳೂರಿಗೂ ಭೇಟಿ ನೀಡಿದ್ದ ಮಾಹಿತಿ ಸಿಕ್ಕಿದೆ ಎಂದಿದ್ದಾರೆ. ಅಲ್ಲಿಗೆ ಏಕೆ ಹೋಗಿದ್ದರು ಎಂಬ ಪ್ರಶ್ನೆಗೆ ನಿಖರವಾಗಿ ಉತ್ತರಿಸದ ಅವರು, ಒಂದೋ ಭಯೋತ್ಪಾದಕ ತರಬೇತಿಗೆ ಅಥವಾ ಇತರ ಸಂಘಟನೆಗಳ ಜತೆಗೆ ಸಂಪರ್ಕ ಸಾಧಿಸಿಕೊಳ್ಳಲು ತೆರಳಿರಬಹುದು ಎಂದು ಹೇಳಿದ್ದಾರೆ.

ಭಾರತಕ್ಕೂ ಉಗ್ರರು ಬಂದು ಹೋಗಿದ್ದರು ಎಂದು ಈ ಹಿಂದೆ ಹಲವು ಮೂಲಗಳನ್ನು ಆಧರಿಸಿ ವರದಿ ಮಾಡಲಾಗಿತ್ತಾದರೂ ಶ್ರೀಲಂಕಾ ಅಧಿಕೃತವಾಗಿ ಈ ಬಗ್ಗೆ ವಿವರಣೆ ನೀಡಿರಲಿಲ್ಲ. ಅಲ್ಲದೆ, ದಾಳಿ ಬಗ್ಗೆ ಮುನ್ನೆಚ್ಚರಿಕೆಯನ್ನು ಭಾರತದ ಗುಪ್ತಚರ ದಳ ನೀಡಿತ್ತು ಎಂಬುದನ್ನೂ ಸೇನಾ ಮುಖ್ಯಸ್ಥರು ಒಪ್ಪಿಕೊಂಡಿದ್ದಾರೆ.

ಭಾರತದ ಮಾಹಿತಿಯನ್ನು ಯಾಕೆ ನಿರ್ಲಕ್ಷಿಸ ಲಾಯಿತು ಎಂದು ಪ್ರಶ್ನಿಸಿದ್ದಕ್ಕೆ ನಮಗೆ ಮಾಹಿತಿ ಮತ್ತು ಗುಪ್ತಚರ ದಳದ ವರದಿ ನೀಡಲಾಗಿತ್ತು.
ಆದರೆ ಆಗಿನ ಸನ್ನಿವೇಶ ವಿಭಿನ್ನವಾಗಿತ್ತು ಎಂದು ಅವರು ಹೇಳಿದ್ದಾರೆ. ಇದಕ್ಕೆ ಸೇನೆ ಮುಖ್ಯಸ್ಥರು, ಗುಪ್ತಚರ ದಳ, ರಾಜಕೀಯ ನಾಯಕರು ಸಹಿತ ಎಲ್ಲರೂ ಜವಾಬ್ದಾರರು ಎಂದಿದ್ದಾರೆ.

ಹೈಅಲರ್ಟ್‌
ಶ್ರೀಲಂಕಾ ಉಗ್ರರು ಬೆಂಗಳೂರಿಗೆ ಬಂದಿದ್ದರು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಮಾಲ್‌ಗ‌ಳು, ದೇಗುಲಗಳು, ಮಸೀದಿಗಳು ಮತ್ತು ಪ್ರಮುಖವಾಗಿ ಚರ್ಚ್‌ಗಳ ಮೇಲೆ ನಿಗಾ ವಹಿಸುವಂತೆ ಸಭೆಯಲ್ಲಿ ಕಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅದರಲ್ಲೂ ಶನಿವಾರ ಮತ್ತು ರವಿವಾರ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಿಕೊಳ್ಳುವಂತೆ ವಲಯ ಹಿರಿಯ ಅಧಿಕಾರಿಗಳಿಗೆ ಮೌಖೀಕ ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಸ್ಥಳೀಯ ವಿಮಾನ ನಿಲ್ದಾಣಗಳಲ್ಲೂ ಕಟ್ಟೆಚ್ಚರ ವಹಿಸುವಂತೆ ಈಗಾಗಲೇ ಸೂಚಿಸಲಾಗಿದೆ. ಪ್ರಮುಖವಾಗಿ ಮಂಗಳೂರು ಹಾಗೂ ಸುತ್ತ-ಮುತ್ತಲ ಕರಾವಳಿ ಭಾಗದ ಭದ್ರತಾ ಪಡೆಗಳು ಜಾಗೃತರಾಗಿರಬೇಕು. ಶಂಕಾಸ್ಪದ ವ್ಯಕ್ತಿಗಳ ಮೇಲೆ ನಿಗಾವಹಿಸಲೂ ಸೂಚಿಸಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ನಗರ ಪೊಲೀಸ್‌ ಆಯುಕ್ತ ಟಿ.ಸುನಿಲ್‌ ಕುಮಾರ್‌, ಈಗಾಗಲೇ ಜನನಿಬಿಡ ಪ್ರದೇಶಗಳಲ್ಲಿ ಅತಿ ಹೆಚ್ಚು ಕಟ್ಟೆಚ್ಚರ ವಹಿಸಲಾಗಿದೆ. ಎಲ್ಲ ಧಾರ್ಮಿಕ ಮುಖಂಡರು, ಪ್ರಾರ್ಥನಾ ಮಂದಿರ ಮುಖ್ಯಸ್ಥರ ಜತೆ ಠಾಣಾ ಹಾಗೂ ಹಿರಿಯ ಅಧಿಕಾರಿಗಳ ಮಟ್ಟದಲ್ಲಿ ಸಭೆ ಕೂಡ ನಡೆಸಲಾಗಿದೆ ಎಂದಿದ್ದಾರೆ.

ಕರ್ನಾಟಕದಲ್ಲಿ ತುರ್ತುಸಭೆ
ಲಂಕಾ ಸರಣಿ ಬಾಂಬ್‌ ಸ್ಫೋಟ ಪ್ರಕರಣದ ಕೆಲವು ಶಂಕಿತ ಉಗ್ರರು ಬೆಂಗಳೂರಿಗೂ ಹೋಗಿದ್ದರು ಎಂಬ ಶ್ರೀಲಂಕಾ ಸೇನಾ ಮುಖ್ಯಸ್ಥರ ಹೇಳಿಕೆ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಪೊಲೀಸ್‌ ಇಲಾಖೆ ಹಾಗೂ ಗುಪ್ತಚರ ವಿಭಾಗದ ಹಿರಿಯ ಅಧಿಕಾರಿಗಳು ಶನಿವಾರ ಸಂಜೆ ತುರ್ತು ಸಭೆ ನಡೆಸಿದ್ದಾರೆ.

ಈ ಕುರಿತು ಪ್ರಾಥಮಿಕ ಮಾಹಿತಿ ಸಂಗ್ರಹಿಸಲು ಗುಪ್ತಚರ ಇಲಾಖೆ ಸಿಬಂದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಪಾಸ್‌ಪೋರ್ಟ್‌ ಕಚೇರಿ, ಮೆಜೆಸ್ಟಿಕ್‌ ಬಸ್‌ ನಿಲ್ದಾಣ, ಮೆಟ್ರೋ ನಿಲ್ದಾಣಗಳಲ್ಲಿ ಅಳವಡಿಸಿರುವ ಸಿಸಿ ಕೆಮರಾದ ಕಳೆದ 3-4 ತಿಂಗಳ ಹಿಂದಿನ ದೃಶ್ಯಾವಳಿಗಳನ್ನು ಪರಿಶೀಲಿಸಿದೆ.

ಶ್ರೀಲಂಕಾ ಸ್ಫೋಟ ಆರೋಪಿಗಳಲ್ಲಿ ಕೆಲವರು ಕೇರಳ ಸಂಪರ್ಕ ಹೊಂದಿದವರಾಗಿದ್ದು, ಅವರಿಗೂ ಕೇರಳ ಮೂಲದಿಂದ ಬಂಧಿತರಾದ ಬೆಂಗಳೂರು ಸ್ಫೋಟ ಪ್ರಕರಣಗಳ ಆರೋಪಿಗಳಿಗೂ ಸಂಬಂಧ ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಯಲಿದೆ.

ಟಾಪ್ ನ್ಯೂಸ್

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಪರ್ಯಾಯ ಶ್ರೀಗಳಿಂದ ಉಗ್ರಾಣ ವೀಕ್ಷಣೆ

ಪರ್ಯಾಯ ಶ್ರೀಗಳಿಂದ ಉಗ್ರಾಣ ವೀಕ್ಷಣೆ

ದಂಡತೀರ್ಥ ಮಠ: ಕೃಷ್ಣಾಪುರ ಶ್ರೀಗಳ ತೀರ್ಥಸ್ನಾನಕ್ಕೆ ಸಜ್ಜು

ದಂಡತೀರ್ಥ ಮಠ: ಕೃಷ್ಣಾಪುರ ಶ್ರೀಗಳ ತೀರ್ಥಸ್ನಾನಕ್ಕೆ ಸಜ್ಜು

ನೊವಾಕ್‌ ಜೊಕೋವಿಕ್‌ ಇಲ್ಲದ ಆಸ್ಟ್ರೇಲಿಯನ್‌ ಓಪನ್‌

ನೊವಾಕ್‌ ಜೊಕೋವಿಕ್‌ ಇಲ್ಲದ ಆಸ್ಟ್ರೇಲಿಯನ್‌ ಓಪನ್‌

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ ಮೇಲೆ ಸವಾರಿ ಮಾಡಿದ ಪಾಟ್ನಾ ಪೈರೇಟ್ಸ್‌

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ ಮೇಲೆ ಸವಾರಿ ಮಾಡಿದ ಪಾಟ್ನಾ ಪೈರೇಟ್ಸ್‌

ಮಣಿಪಾಲ: ಮಂಚಿಯ ರಾಜೀವನಗರದ ಮೀಸಲು ಅರಣ್ಯದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ದುರಂತ

ಮಣಿಪಾಲ: ಮಂಚಿ ರಾಜೀವನಗರದ ಮೀಸಲು ಅರಣ್ಯದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ದುರಂತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29 ಹುಲಿಗಳಿಗೆ ಜನ್ಮನೀಡಿ, 17 ವರ್ಷದಷ್ಟು ದೀರ್ಘಾವಧಿ ಬದುಕಿದ ಮಹಾಮಾತೆ ನಿಧನ

29 ಹುಲಿಗಳಿಗೆ ಜನ್ಮನೀಡಿ, 17 ವರ್ಷದಷ್ಟು ದೀರ್ಘಾವಧಿ ಬದುಕಿದ ಮಹಾಮಾತೆ ನಿಧನ

1-adasada

ಕೋವಿಡ್ ಎಂದು ಶಾಲೆ ಮುಚ್ಚಿದರೆ ಕಲಿಕಾ ಬಡತನ ಬರುತ್ತದೆ! : ಜೈಮ್ ಸಾವೇದ್ರಾ ಎಚ್ಚರಿಕೆ

aravind-kejriwal

ಗೋವಾದಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿ ಸಾಧ್ಯ: ಕೇಜ್ರಿವಾಲ್

ra Ga

ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ:ರಾಹುಲ್ ಗಾಂಧಿ

1-assadsa

ಯುಪಿ: ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಬಿಜೆಪಿಗೆ ಸೇರ್ಪಡೆ

MUST WATCH

udayavani youtube

ಸಾಲಿಗ್ರಾಮ ಗುರುನರಸಿಂಹ, ಆಂಜನೇಯ ರಥೋತ್ಸವ ಸಂಪನ್ನ

udayavani youtube

ನನ್ನಮ್ಮ ಸೂಪರ್ ಸ್ಟಾರ್ ‘ಸಮನ್ವಿ’ ಅಸ್ತಿ ಕಾವೇರಿ ನದಿಯಲ್ಲಿ ವಿಸರ್ಜನೆ

udayavani youtube

ಮೈಸೂರು ಮೃಗಾಲಯದಲ್ಲಿ ಹುಟ್ಟುಹಬ್ಬ ಆಚರಣೆಗೊರಿಲ್ಲಾ ‘Demba’ ಗೆ ಖುಷಿಯೋ ಖುಷಿ

udayavani youtube

ವಿವಿಧ ಮುಹೂರ್ತಗಳು ಪರ್ಯಾಯದ ವಿಶೇಷತೆ

udayavani youtube

ಮೂಡಿಗೆರೆ : ಇಡೀ ಹಳ್ಳಿಯ ಜನರಿಗೆ ಕೆಮ್ಮು! ಇದು ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಫಲ

ಹೊಸ ಸೇರ್ಪಡೆ

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

ಪರ್ಯಾಯೋತ್ಸವಕ್ಕೆ ಸ್ವಚ್ಛತೆಯ ಸ್ಪರ್ಶ: ಮೊಬೈಲ್‌ ಶೌಚಾಲಯ ಬಳಕೆಗೆ ಸಿದ್ಧ

ಪರ್ಯಾಯೋತ್ಸವಕ್ಕೆ ಸ್ವಚ್ಛತೆಯ ಸ್ಪರ್ಶ: ಮೊಬೈಲ್‌ ಶೌಚಾಲಯ ಬಳಕೆಗೆ ಸಿದ್ಧ

“ಸಂಸ್ಕೃತದಲ್ಲಿ ಅಭಿನಂದನೆ ಹೆಮ್ಮೆಯ ವಿಚಾರ’

“ಸಂಸ್ಕೃತದಲ್ಲಿ ಅಭಿನಂದನೆ ಹೆಮ್ಮೆಯ ವಿಚಾರ’

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಅಶ್ವತ್ಥ ಎಲೆಯಲ್ಲಿ ಮೂಡಿಬಂದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು

ಅಶ್ವತ್ಥ ಎಲೆಯಲ್ಲಿ ಮೂಡಿಬಂದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.