ಮಗು ಹೆತ್ತ 15ರ ಬಾಲಕಿ; ಮಗುವಿನ ತಂದೆಗೆ 13!
Team Udayavani, Apr 22, 2017, 3:45 AM IST
ತಿರುವನಂತಪುರಂ: ಕೇವಲ 15 ವರ್ಷದ ಆ ಬಾಲೆ ಮಗುವಿಗೆ ಜನ್ಮ ನೀಡಿದ್ದಾಳೆ. ಆ ಮಗುವಿನ ತಂದೆ ಪಕ್ಕದ ಮನೆ ಹುಡುಗ. ಅವನ ವಯಸ್ಸು ಈಗಿನ್ನೂ 13 ವರ್ಷ! ಇಂಥದೊಂದು ಅಸಹಜ ಘಟನೆ ಹಿನ್ನೆಲೆಯಲ್ಲಿ ತಿರುವನಂತಪುರಂ ಪೊಲೀಸರು 13 ವರ್ಷದ ಬಾಲಕನನ್ನು ಗುರುವಾರ ಬಂಧಿಸಿದ್ದಾರೆ.
ಬಾಲಕನನ್ನು ಕೊಲ್ಲಂ ಮುಖ್ಯ ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಿದ್ದು, ನ್ಯಾಯಾಧೀಶರು ಬಾಲಕನಿಗೆ ಜಾಮೀನು ಮಂಜೂರು ಮಾಡಿ, ಪೋಷಕರೊಂದಿಗೆ ಕಳುಹಿಸಿಕೊಟ್ಟಿದ್ದಾರೆ. ಪೊಲೀ ಸರು ಹೇಳುವಂತೆ, “9ನೇ ತರಗತಿ ಬಾಲಕಿಯೊಬ್ಬಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಆಕೆ ಗರ್ಭಿಣಿಯಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸುವಂತೆ ತಿಳಿಸಿದ್ದಾರೆ. ಆದರೆ ಪೋಷಕರು ಬಾಲಕಿಯನ್ನು ಮನೆಗೆ ಕರೆದೊಯ್ದಿದ್ದು, ಮನೆಗೆ ಹೋಗುತ್ತಿದ್ದಂತೆ ಹೆರಿಗೆಯಾಗಿದೆ. ತಕ್ಷಣ ಪೋಷಕರು ಪಕ್ಕದ ಮನೆ ಹುಡುಗನ ಮೇಲೆ ಪೊಲೀಸರಿಗೆ ದೂರು ನೀಡಿದ್ದಾರೆ.
ತಾಯಿಯಾಗಲು ಪಕ್ಕದ ಮನೆ ಹುಡುಗನೇ ಕಾರಣ. ಆತ ರಜೆ ಕಳೆಯಲು ಮಂಗಳೂರಿನಲ್ಲಿನ ಸಂಬಂಧಿಕರ ಮನೆಗೆ ತೆರಳಿದ್ದಾನೆ ಎಂದು ಬಾಲಕಿ ಪೊಲೀಸರಿಗೆ ತಿಳಿಸಿದ್ದು ಬಾಲಕನ ವಿಚಾರಣೆ ನಡೆಸಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು