Train Tragedy ಜವಾಬ್ದಾರರಿಗೆ ಕಠಿಣ ಶಿಕ್ಷೆಯಾಗುತ್ತದೆ: ಒಡಿಶಾದಲ್ಲಿ ಪ್ರಧಾನಿ ಮೋದಿ

ಏರುತ್ತಲೇ ಇದೆ ಮೃತ್ಯು ಸಂಖ್ಯೆ....

Team Udayavani, Jun 3, 2023, 6:48 PM IST

1-sdddasdas

ಬಾಲಸೋರ್‌: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಒಡಿಶಾದ ಬಾಲಸೋರ್‌ನಲ್ಲಿ ರೈಲುಗಳ ಭೀಕರ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದು, ಇದಕ್ಕೆ ಕಾರಣರಾದವರಿಗೆ “ಕಠಿಣ ಶಿಕ್ಷೆ ವಿಧಿಸಲಾಗುವುದು” ಎಂದು ಹೇಳಿದ್ದಾರೆ.

ದುರಂತದಲ್ಲಿ ಕುಟುಂಬಸ್ಥರನ್ನು ಕಳೆದುಕೊಂಡವರ ಜತೆ ಸರ್ಕಾರ ನಿಂತಿದೆ.ಇದೊಂದು ನೋವಿನ ಘಟನೆ. ಗಾಯಗೊಂಡವರ ಚಿಕಿತ್ಸೆಗೆ ಸರ್ಕಾರ ಎಲ್ಲ ನೆರವನ್ನು ನೀಡಲಿದೆ. ಇದು ಗಂಭೀರ ಘಟನೆಯಾಗಿದೆ, ಪ್ರತಿ ಕೋನದಿಂದ ತನಿಖೆಗೆ ಸೂಚನೆಗಳನ್ನು ನೀಡಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು” ಎಂದು ಹೇಳಿದರು.

ಎರಡು ದಶಕಗಳಿಗಿಂತಲೂ ಹೆಚ್ಚು ಅವಧಿಯಲ್ಲಿ ನಡೆದ ದೇಶದ ಅತ್ಯಂತ ಭೀಕರ ರೈಲು ಅಪಘಾತದಲ್ಲಿ ಕನಿಷ್ಠ 288 ಜನರು ಸಾವನ್ನಪ್ಪಿದ್ದಾರೆ ಮತ್ತು 800 ಜನರು ಗಾಯಗೊಂಡಿದ್ದಾರೆ.

ಭುವನೇಶ್ವರದಿಂದ ಉತ್ತರಕ್ಕೆ 170 ಕಿಮೀ ದೂರದಲ್ಲಿರುವ ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ನಿಲ್ದಾಣದಲ್ಲಿ ಘಟನೆ ನಡೆದ ಸ್ಥಳದ ಬಳಿ ಪ್ರಧಾನಿ ಮೋದಿ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಬಂದಿಳಿದರು. ಅಪಘಾತದಲ್ಲಿ ಬದುಕುಳಿದವರನ್ನು ಭೇಟಿ ಮಾಡಲು ಅವರು ಬಾಲಸೋರ್ ಜಿಲ್ಲಾ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿದರು. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಸ್ಥಳವನ್ನು ಪರಿಶೀಲಿಸಿದರು.

ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ಭೀಕರ ಅವಘಡ ಸಂಭವಿಸಿದೆ. ರೈಲ್ವೆ ಅಧಿಕಾರಿಗಳ ಪ್ರಕಾರ ಎರಡು ರೈಲುಗಳಲ್ಲಿ 3,400 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ರಾಜ್ಯಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಿ ಆಸ್ಪತ್ರೆಗಳಲ್ಲಿ ಗಾಯಗೊಂಡವರನ್ನು ಭೇಟಿಯಾಗಿದ್ದಾರೆ. ಅವರ ಒಡಿಶಾ ಸಹವರ್ತಿ ನವೀನ್ ಪಟ್ನಾಯಕ್ ಅವರು ಶುಕ್ರವಾರ ಬೆಳಗ್ಗೆ ಬಾಲಸೋರ್‌ಗೆ ಭೇಟಿ ನೀಡಿದರು ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಅಪಘಾತದ ಬಳಿಕ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಮರುಸ್ಥಾಪನೆ ಕಾರ್ಯ ಪ್ರಾರಂಭವಾಗಿದೆ ಎಂದು ರೈಲ್ವೇ ವಕ್ತಾರ ಅಮಿತಾಭ್ ಶರ್ಮಾ ಘಟನೆಯ 18 ಗಂಟೆಗಳ ನಂತರ ತಿಳಿಸಿದ್ದಾರೆ.

ಟಾಪ್ ನ್ಯೂಸ್

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

World Tourism Day ದೂರದೃಷ್ಟಿಯ ಯೋಜನೆ ಕಾರ್ಯಗತಗೊಳಿಸಿ: ಖಾದರ್‌

World Tourism Day ದೂರದೃಷ್ಟಿಯ ಯೋಜನೆ ಕಾರ್ಯಗತಗೊಳಿಸಿ: ಖಾದರ್‌

Udupi ಪ್ರಕೃತಿಯನ್ನು ನೋಡುವ ದೃಷ್ಟಿ ಬದಲಾಗಬೇಕು: ಶಾಸಕ ಗುರ್ಮೆ

Udupi ಪ್ರಕೃತಿಯನ್ನು ನೋಡುವ ದೃಷ್ಟಿ ಬದಲಾಗಬೇಕು: ಶಾಸಕ ಗುರ್ಮೆ

Udupi ಮಾದಕ ವ್ಯಸನಮುಕ್ತ ಜಿಲ್ಲೆಗೆ ವೈದ್ಯಕೀಯ ಕ್ಷೇತ್ರದ ಕೊಡುಗೆ ಅತ್ಯಾವಶ್ಯಕ

Udupi ಮಾದಕ ವ್ಯಸನಮುಕ್ತ ಜಿಲ್ಲೆಗೆ ವೈದ್ಯಕೀಯ ಕ್ಷೇತ್ರದ ಕೊಡುಗೆ ಅತ್ಯಾವಶ್ಯಕ

1-fdsdsa

ODI: ಭಾರತದ ಎದುರು ವೈಟ್‌ವಾಶ್‌ ತಪ್ಪಿಸಿಕೊಂಡ ಆಸೀಸ್ ; 66 ರನ್ ಗಳ ಜಯ

1-cssadsa

Karwar; ಯುದ್ಧವಿಮಾನ ಮ್ಯೂಸಿಯಂ ಸ್ಥಾಪನೆಗೆ ಸಿದ್ಧತೆಗಳು ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ASSAM MEGHALAY

Assam-Meghalaya: ಗಡಿ ಸಂಘರ್ಷ ಬಿಲ್ಲು-ಬಾಣದ ದಾಳಿ, ವ್ಯಕ್ತಿಗೆ ಗಾಯ

RINKU DUGGAL

IAS ಅಧಿಕಾರಿ ರಿಂಕು ದುಗ್ಗಾಗೆ ಕಡ್ಡಾಯ ನಿವೃತ್ತಿ

ISRO VENUS

ISRO: ಶುಕ್ರನತ್ತ ಹೋಗಲು ಇಸ್ರೋ ಸಿದ್ಧತೆ

THE

THE ರ್‍ಯಾಂಕಿಂಗ್‌: IISC ದೇಶಕ್ಕೆ ಫ‌ಸ್ಟ್‌

edu ajji

Literate: 92ನೇ ವಯಸ್ಸಿನಲ್ಲಿ ಅಕ್ಷರಸ್ತರಾದ ಅಜ್ಜಿ !

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

ಸೆ. 30: ಕಂಬಳ ಸಮಿತಿ ಸಭೆ: ದೇವಿಪ್ರಸಾದ ಶೆಟ್ಟಿ ಬೆಳಪು

Sept. 30: ಕಂಬಳ ಸಮಿತಿ ಸಭೆ: ದೇವಿಪ್ರಸಾದ ಶೆಟ್ಟಿ ಬೆಳಪು

eid milab

Prophet Muhammad (ಸ): ಸಮಾನತೆಯ ಹರಿಕಾರ- ಇಂದು ಪ್ರವಾದಿ ಮುಹಮ್ಮದರ ಜನ್ಮದಿನ

1-2w323

Hunsur; ಗದ್ದಿಗೆಯಲ್ಲಿ 59 ಆದಿವಾಸಿ ಜೋಡಿಗಳ ಸಾಮೂಹಿಕ ವಿವಾಹ

Mangaluru ನವದುರ್ಗಾ ಟಿವಿಎಸ್‌: ಐಕ್ಯೂಬ್‌ ಎಲೆಕ್ಟ್ರಿಕ್‌ ಸ್ಕೂಟರ್‌ ಬಿಡುಗಡೆ

Mangaluru ನವದುರ್ಗಾ ಟಿವಿಎಸ್‌: ಐಕ್ಯೂಬ್‌ ಎಲೆಕ್ಟ್ರಿಕ್‌ ಸ್ಕೂಟರ್‌ ಬಿಡುಗಡೆ

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.