Trains ನಿರ್ವಹಣೆ ಮಾಡಲಾಗದವರು ದೇಶವನ್ನು ಹೇಗೆ ನಡೆಸುತ್ತಾರೆ: ಕೇಜ್ರಿವಾಲ್
Team Udayavani, Jun 18, 2023, 5:36 PM IST
ಹೊಸದಿಲ್ಲಿ: ಭಾರತೀಯ ರೈಲ್ವೇ ಅಧೀನದಲ್ಲಿರುವ ರೈಲುಗಳ ಎಸಿ ಮತ್ತು ಸ್ಲೀಪರ್ ಕೋಚ್ಗಳು ಸಾಮಾನ್ಯಕ್ಕಿಂತ ಕೆಟ್ಟದಾಗಿದೆ ಎಂದು ಆರೋಪಿಸಿ ಭಾನುವಾರ ಬಿಜೆಪಿ ವಿರುದ್ಧ ಟ್ವೀಟ್ ಬಾಣ ಎಸೆದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ರೈಲ್ವೇ ವ್ಯವಸ್ಥೆಯನ್ನು ನಡೆಸಲು ಸಾಧ್ಯವಾಗದಿದ್ದರೆ ಬಿಜೆಪಿ ದೇಶವನ್ನು ಹೇಗೆ ನಡೆಸುತ್ತದೆ ಎಂದು ಪ್ರಶ್ನಿಸಿದ್ದಾರೆ.
ಕೇಜ್ರಿವಾಲ್ ಅವರ ಟ್ವೀಟ್ಗೆ ಬಿಜೆಪಿಯು ವ್ಯಂಗ್ಯಾತ್ಮಕ ಉತ್ತರವನ್ನು ನೀಡಿರುವ ಬಿಜೆಪಿ, ದೆಹಲಿ ಸಾರಿಗೆ ನಿಗಮದ ಬಸ್ಗಳ ಸ್ಥಿತಿಯ ಬಗ್ಗೆ ಪ್ರಶ್ನಿಸಿದೆ.
ಹವಾನಿಯಂತ್ರಿತ ಮತ್ತು ಸ್ಲೀಪರ್ ಕೋಚ್ಗಳು ಮೀಸಲಾತಿಯನ್ನು ಹೊಂದಿರದ ಜನರಿಂದ ತುಂಬಿ ತುಳುಕುತ್ತಿವೆ ಎಂದು ಜನರು ದೂರಿರುವ ಹಲವಾರು ಟ್ವೀಟ್ಗಳನ್ನು ಎಎಪಿ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ರಿಟ್ವೀಟ್ ಮಾಡಿದ್ದಾರೆ.
ಇಂದು ಎಸಿ ಕೋಚ್ ರಿಸರ್ವೇಶನ್ ಮಾಡಿದರೂ ಕುಳಿತುಕೊಳ್ಳಲು, ಮಲಗಲು ಸೀಟು ಸಿಗುತ್ತಿಲ್ಲ. ಎಸಿ ಮತ್ತು ಸ್ಲೀಪರ್ ಕೋಚ್ಗಳು ಸಾಮಾನ್ಯಕ್ಕಿಂತ ಕೆಟ್ಟದಾಗಿದೆ. ಅವರಿಗೆ ಸರ್ಕಾರವನ್ನು ಹೇಗೆ ನಡೆಸಬೇಕೆಂದು ತಿಳಿದಿಲ್ಲ. ಅವರಿಗೆ ಅರ್ಥವಾಗುವುದೇ ಇಲ್ಲ. ಅನಕ್ಷರಸ್ಥ ಸರ್ಕಾರ. ಅವರು ಪ್ರತಿಯೊಂದು ಕ್ಷೇತ್ರವನ್ನು ಹಾಳು ಮಾಡುತ್ತಿದ್ದಾರೆ ಎಂದು ಕೇಜ್ರಿವಾಲ್ ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ