3 ಉಗ್ರರು ಹತ, ಓರ್ವ ಯೋಧ ಹುತಾತ್ಮ
Team Udayavani, Sep 28, 2018, 8:55 AM IST
ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್ನಾಗ್ ಮತ್ತು ಬದ್ಗಾಂ ಜಿಲ್ಲೆಗಳಲ್ಲಿ ಉಗ್ರರು ಮತ್ತು ಸೇನೆ ನಡುವೆ ನಡೆದ ಪ್ರತ್ಯೇಕ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಕಾರ್ಯಾಚರಣೆಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಅನಂತ್ನಾಗ್ನ ಖಾಜಿಗುಂಡ್ ಜಿಲ್ಲೆಯಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸಿತು. ಈ ವೇಳೆ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದು, ಎರಡೂ ಬದಿಯಿಂದ ಗುಂಡಿನ ಚಕಮಕಿ ನಡೆಯಿತು. ಪರಿಣಾಮ ಓರ್ವ ಯೋಧ ಹುತಾತ್ಮನಾಗಿದ್ದು, ಒಬ್ಬ ಉಗ್ರನನ್ನು ಸೇನೆ ಹೊಡೆದುರುಳಿಸಿದೆ. ಬದ್ಗಾಂನ ಪಂಜಾನ್ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ