ಗ್ಯಾಸ್ ಸಿಲಿಂಡರ್ ಟ್ರಕ್ಕಿಗೆ ಬೈಕ್ ಢಿಕ್ಕಿ: 3 ವಿದ್ಯಾರ್ಥಿಗಳ ಸಾವ
Team Udayavani, Feb 3, 2018, 4:08 PM IST
ಕೊಯಮುತ್ತೂರು : ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಟ್ರಕ್ಕಿಗೆ ಬೈಕ್ ಢಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ದುರ್ಘಟನೆ ಪಾಲಕ್ಕಾಡ್ ಬೈಪಾಸ್ ರಸ್ತೆಯಲ್ಲಿ ಸಂಭವಿಸಿತು. ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನ್ನ ಇಬ್ಬರು ಸಹಪಾಠಿಗಳನ್ನು ಬೈಕ್ನಲ್ಲಿ ಕೂರಿಸಿಕೊಂಡು ಮಳುಮಿಚಾಪಟ್ಟಿ ಎಂಬಲ್ಲಿ ತಾನು ವಾಸವಾಗಿರುವ ಬಾಡಿಗೆ ಮನೆಗೆ ನಿನ್ನೆ ಮಧ್ಯ ರಾತ್ರಿ ಹೋಗುತ್ತಿದ್ದ.
ತಮ್ಮ ಮುಂದುಗಡೆಯಲ್ಲಿ ಹೋಗುತ್ತಿದ್ದ ಕಬ್ಬಿಣದ ಶೀಟುಗಳ ಲಾರಿಯನ್ನು ಓವರ್ಟೇಕ್ ಮಾಡುವ ಭರದಲ್ಲಿ ವಿದ್ಯಾರ್ಥಿಗಳ ಬೈಕು ಎದುರುಗಡೆಯಿಂದ ಬರುತ್ತಿದ್ದ ಗ್ಯಾಸ್ ಸಿಲಿಂಡರ್ ಟ್ರಕ್ಕಿಗೆ ಢಿಕ್ಕಿ ಹೊಡೆಯಿತು.
ಪರಿಣಾಮವಾಗಿ ಎಲ್ಲ ಮೂರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ