ಜಮ್ಮು-ಶ್ರೀನಗರ್ ರಾಷ್ಟ್ರೀಯ ಹೆದ್ದಾರಿ; ಎನ್ ಕೌಂಟರ್ ಗೆ ಮೂವರು ಉಗ್ರರ ಸಾವು

ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದರು. ನಂತರ ಪೊಲೀಸರ ಪ್ರತಿದಾಳಿಗೆ ಉಗ್ರನೊಬ್ಬ ಸಾವನ್ನಪ್ಪಿದ್ದ

Team Udayavani, Jan 31, 2020, 11:39 AM IST

ಜಮ್ಮು: ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರು ಸಾವನ್ನಪ್ಪಿರುವ ಘಟನೆ ಶುಕ್ರವಾರ ಜಮ್ಮು ಸಮೀಪ ಶುಕ್ರವಾರ ಮುಂಜಾನೆ ನಡೆದಿದೆ ಎಂದು ವರದಿ ತಿಳಿಸಿದೆ.

ಇಂದು ಮುಂಜಾನೆ 5.45ರ ಹೊತ್ತಿಗೆ ಪೊಲೀಸ್ ತಂಡ ಜಮ್ಮು-ಶ್ರೀನಗರ್ ರಾಷ್ಟ್ರೀಯ ಹೆದ್ದಾರಿಯ ನಗ್ರೋಟಾ ಟೋಲ್ ಪೋಸ್ಟ್ ಬಳಿ ಲಾರಿಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಶ್ರೀನಗರ್ ನಿಂದ ಬಂದ ಲಾರಿಯನ್ನು ತಡೆದು ತಪಾಸಣೆ ನಡೆಸಲು ಮುಂದಾದಾಗ ಲಾರಿಯೊಳಗೆ ಅಡಗಿದ್ದ ಉಗ್ರರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು ಎಂದು ವರದಿ ತಿಳಿಸಿದೆ.

ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದರು. ನಂತರ ಪೊಲೀಸರ ಪ್ರತಿದಾಳಿಗೆ ಉಗ್ರನೊಬ್ಬ ಸಾವನ್ನಪ್ಪಿದ್ದ, ಉಳಿದ ಇಬ್ಬರು ಉಗ್ರರು ದಟ್ಟ ಅರಣ್ಯ ಪ್ರದೇಶದೊಳಕ್ಕೆ ಪರಾರಿಯಾಗಿದ್ದರು. ನಂತರ ಭದ್ರತಾ ಪಡೆ ಹಾಗೂ ಪೊಲೀಸರ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ಉಳಿದ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಯಿತು ಎಂದು ವರದಿ ವಿವರಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ