ಸರ್ಕಾರಿ ಕಾಲೇಜಿನ ವೈದ್ಯಕೀಯ ಪರೀಕ್ಷೆ ವೇಳೆ ಮೂವರು ಗರ್ಭಿಣಿ ವಿದ್ಯಾರ್ಥಿನಿಯರು ಪತ್ತೆ!
ಕೆಲವು ಸಮಯದ ಹಿಂದೆ ಈ ಸಂತ್ರಸ್ತೆಯರು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆಂದು ಹೇಳಿರುವುದಾಗಿ ವರದಿ ವಿವರಿಸಿದೆ
Team Udayavani, Dec 30, 2019, 4:16 PM IST
ಹೈದರಾಬಾದ್:ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಯರ ವೈದ್ಯಕೀಯ ತಪಾಸಣೆ ನಡೆಸಿದ ವೇಳೆ ಮೂವರು ವಿದ್ಯಾರ್ಥಿನಿಯರು ಗರ್ಭಿಣಿಯಾಗಿರುವ ವಿಷಯ ಬೆಳಕಿಗೆ ಬಂದ ಘಟನೆ ತೆಲಂಗಾಣ ಜಿಲ್ಲೆಯ ಕುಮಾರಂಭೀಮ್ ಅಸೀಫಾಬಾದ್ ನಲ್ಲಿ ನಡೆದಿದೆ.
ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ಕಾಲೇಜಿನ ಹತ್ತು ವಿದ್ಯಾರ್ಥಿನಿಯರಿಗೆ ವೈದ್ಯಕೀಯ ತಪಾಸಣೆ ನಡೆಸಿದ ವೇಳೆ ಮೂವರು ಗರ್ಭಿಣಿಯರಾಗಿರುವ ವಿಷಯ ಬಹಿರಂಗವಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ(ಡಿಸಿಪಿಒ) ತಿಳಿಸಿದ್ದು, ಕೆಲವು ಸಮಯದ ಹಿಂದೆ ಈ ಸಂತ್ರಸ್ತೆಯರು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆಂದು ಹೇಳಿರುವುದಾಗಿ ವರದಿ ವಿವರಿಸಿದೆ.
ಆರೋಪಿಗಳನ್ನು ಇನ್ನಷ್ಟೇ ಪತ್ತೆಹಚ್ಚಬೇಕಾಗಿದೆ. ಇಬ್ಬರು ಸಂತ್ರಸ್ತೆಯರು ಬಿಎಸ್ಸಿ ಪ್ರಥಮ ವರ್ಷದ ವಿದ್ಯಾರ್ಥಿನಿಯರಾಗಿದ್ದು, ಒಬ್ಬಾಕೆ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಎಂದು ವರದಿ ಹೇಳಿದೆ. ಕಾಲೇಜಿನಲ್ಲಿ ನವೆಂಬರ್ 21ರಂದು ಮೆಡಿಕಲ್ ತಪಾಸಣೆ ನಡೆಸಲಾಗಿದ್ದು, ಈ ಘಟನೆ ಶನಿವಾರ ಬಹಿರಂಗವಾಗಿರುವುದಾಗಿ ವರದಿ ತಿಳಿಸಿದೆ.
ಆರಂಭಿಕ ತನಿಖೆಯಲ್ಲಿ, ಮನೆಯ ಸಮೀಪದಲ್ಲಿಯೇ ಇದ್ದ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ತಿಳಿದು ಬಂದಿದೆ. ಈ ಕಾಲೇಜು ಮಂಡಳಿ ಈವರೆಗೆ ಯಾವುದೇ ದೂರನ್ನು ದಾಖಲಿಸಿಲ್ಲ. ಈ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಮಕ್ಕಳ ಹಕ್ಕು ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮೂರು ತಿಂಗಳ ಗರ್ಭಿಣಿಯಾಗಿರುವುದು ಪತ್ತೆಯಾಗಿದೆ. ಆಕೆಯ ಶಾಲೆಯ ಮುಖ್ಯೋಪಾಧ್ಯಾಯಿನಿಯ ಪತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಲಾಗಿದೆ. ಈ ಘಟನೆ ಒಡಿಶಾದ ಕೋರಾಪುಟ್ ಜಿಲ್ಲೆಯಲ್ಲಿ ಡಿಸೆಂಬರ್ 7ರಂದು ನಡೆದಿದ್ದು, ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು