ಟಿಪ್ಪರ್ ಗೆ ಟಾಟಾ ಸುಮೋ ಢಿಕ್ಕಿ: ನಾಲ್ವರು ಸಜೀವ ದಹನ, ಮೂವರಿಗೆ ಗಾಯ
Team Udayavani, Nov 2, 2020, 8:32 AM IST
ಹೈದರಾಬಾದ್: ಟಾಟಾ ಸುಮೋ ವಾಹನವೊಂದು ಟಿಪ್ಪರ್ ಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯಲ್ಲಿ ನಡೆದಿದೆ.
ಕಡಪಾ ಜಿಲ್ಲೆಯ ವಲ್ಲೂರು ತಾಲೂಕಿನ ಗೋಟೂರು ಗ್ರಾಮದಲ್ಲಿ ಈ ಭೀಕರ ಅಪಘಾತ ನಡೆದಿದೆ. ಟಿಪ್ಪರ್- ಸುಮೋ ನಡುವಿನ ಢಿಕ್ಕಿಯ ಪರಿಣಾಮ ಬೆಂಕಿ ಹತ್ತಿಕೊಂಡು ನಾಲ್ವರು ಸಜೀವ ದಹನವಾಗಿದ್ದಾರೆ.
ಟಿಪ್ಪರ್ ಲೋಡ್ ಮಾಡಿ ರಸ್ತೆಗೆ ಬಂದ ವೇಳೆ ಟಾಟಾ ಸುಮೋ ಢಿಕ್ಕಿ ಹೊಡೆದಿದೆ. ಟಿಪ್ಪರ್ ಲಾರಿಯ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡಿದೆ. ಹೀಗಾಗಿ ಟಾಟಾ ಸುಮೋದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಮೃತಪಟ್ಟವರು ತಮಿಳು ನಾಡು ಮೂಲದವರು ಎಂದು ವರದಿಯಾಗಿದೆ.
ಬೆಂಕಿಯ ಕೆನ್ನಾಲಗೆಗೆ ಮೂರು ವಾಹನಗಳು ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು ಕಡಪ ರಿಮ್ಸ್ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕಡಪ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ